ಹಾರಾಡಿ ರೈಲ್ವೇ ಸೇತುವೆ ಕೆಳಭಾಗದ ಕಾಮಗಾರಿ-ತಿಂಗಳ ಕಾಲ ರಸ್ತೆ ಬಂದ್: ಜಿಲ್ಲಾಧಿಕಾರಿ ಆದೇಶ
ಜಿಲ್ಲಾಧಿಕಾರಿ ಅವರ ಆದೇಶದಂತೆ ಈ ತಾತ್ಕಾಲಿಕ ವ್ಯವಸ್ಥೆ ಜೂ.18 ರಿಂದ ಜುಲೈ 18 ತನಕ ನಡೆಯಲಿದೆ. ಹಾರಾಡಿಯ ರೈಲ್ವೇ ಸೇತುವೆ ಕೆಳಭಾಗದಲ್ಲಿ ರಸ್ತೆ ಬಂದ್ ಮಾಡಲು ಪುತ್ತೂರು ಲೋಕೋಪಯೋಗಿ ಇಲಾಖೆ ಪುತ್ತೂರು ಎಸಿಯವರ ಮೂಲಕ ಜಿಲ್ಲಾಧಿಕಾರಿ ಅವರಿಗೆ ಮನವಿ ಮಾಡಿತ್ತು. ಈ ಮನವಿಯನ್ನು ಪರಸ್ಕರಿಸಿದ ಜಿಲ್ಲಾಧಿಕಾರಿ ಅವರು ರಸ್ತೆ ಬಂದ್ ಮಾಡಿ ಕಾಮಗಾರಿ ನಿರ್ವಹಣೆಗೆ ಅನುಮತಿ ನೀಡಿದ್ದಾರೆ.
ಬದಲಿ ಸಂಚಾರ ವ್ಯವಸ್ಥೆ:
ಪುತ್ತೂರಿನಿಂದ ಉಪ್ಪಿನಂಗಡಿ ಕಡೆಗೆ ಸಂಚರಿಸುವ ವಾಹನಗಳು ಪುತ್ತೂರು ಖಾಸಗಿ ಬಸ್ ನಿಲ್ದಾಣ ಮಾರ್ಗವಾಗಿ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯ ಮೂಲಕ ಕೊಟೇಚಾ ಹಾಲ್ ಬಳಿ ಉಪ್ಪಿನಂಗಡಿ ರಸ್ತೆಯನ್ನು ಸಂಪರ್ಕಿಸುವುದು. ಉಪ್ಪಿನಂಗಡಿ ಕಡೆಯಿಂದ ಪುತ್ತೂರು ಕಡೆಗೆ ಸಂಚರಿಸುವ ವಾಹನಗಳು ಕೊಟೇಚಾ ಹಾಲ್ ಮೂಲಕ ಎಪಿಎಂಸಿ ರಸ್ತೆಯಾಗಿ ಪುತ್ತೂರು ಮುಖ್ಯ ರಸ್ತೆಯನ್ನು ಸಂಪರ್ಕಿಸುವುದು. ಉಪ್ಪಿನಂಗಡಿ ರಸ್ತೆಯಿಂದ ಮಂಗಳೂರು ಕಡೆಗೆ ಸಂಚರಿಸುವ ವಾಹನಗಳು ಪಡೀಲ್ ಜಂಕ್ಷನ್ ನಗರ ರಸ್ತೆಯಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.