ಪೋಕ್ಸೋ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
Wednesday, June 10, 2026
ಪುತ್ತೂರು: ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಬಂಧಿತನನ್ನು ಪುತ್ತೂರು ನರಿಮೊಗರು ನಿವಾಸಿ ನಮನ್ ನಾಯಕ್ (32) ಎಂದು ಗುರುತಿಸಲಾಗಿದೆ.
ಘಟನೆಯ ವಿವರ:
ಪುತ್ತೂರು ನಗರ ಪೊಲೀಸ್ ಠಾಣಾ ಅ.ಕ್ರ: 53/2018, ಕಲಂ 448, 506, 354 ಐಪಿಸಿ & ಕಲಂ 12 ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬೆಂಗಳೂರಿನ ಕೂಡ್ಲುಪೇಟೆ ಎಂಬಲ್ಲಿ ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.