ಸಂತ ಫಿಲೋಮಿನಾ ಪ.ಪೂ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ವೃತ್ತಿಪರ ಆಯ್ಕೆಗಳ ಕುರಿತಾಗಿ ಮಾಹಿತಿ ಕಾರ್ಯಾಗಾರ

ಸಂತ ಫಿಲೋಮಿನಾ ಪ.ಪೂ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ವೃತ್ತಿಪರ ಆಯ್ಕೆಗಳ ಕುರಿತಾಗಿ ಮಾಹಿತಿ ಕಾರ್ಯಾಗಾರ


ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವಾಣಿಜ್ಯ ಸಂಘದ ಆಶ್ರಯದಲ್ಲಿ ವಾಣಿಜ್ಯ ವಿಭಾಗದಲ್ಲಿ ವೃತ್ತಿಪರ ಆಯ್ಕೆಗಳ ಕುರಿತಾಗಿ ಮಾಹಿತಿ ಕಾರ್ಯಾಗಾರವು ಜೂ.10 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಸಿಎ ಸ್ವಸ್ತಿಕ್. ಪಿ ಬೆಂಗಳೂರು ಮಾತನಾಡಿ, ವಾಣಿಜ್ಯ ವಿಭಾಗವು ವ್ಯವಹಾರ ಕ್ಷೇತ್ರದ ಭಾಷೆಯಾಗಿದ್ದು, ವಾಣಿಜ್ಯ ವಿಭಾಗದಲ್ಲಿ ವಿಪುಲವಾದ ಅವಕಾಶಲಿವೆ. ಈ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಲು ವಿದ್ಯಾರ್ಥಿಗಳು ಪ್ರಯತ್ನಿಸಬೇಕು ಎಂದು ತಿಳಿಸಿದರು. 


ಲೆಕ್ಕ ಪರಿಶೋಧಕ (ಚಾರ್ಟೆಡ್ ಅಕೌಂಟೆಂಟ್) ಕ್ಷೇತ್ರವು ವಿಪುಲ ಅವಕಾಶಗಳ ಕ್ಷೇತ್ರವಾಗಿದ್ದು, ಕಠಿಣ ಪರಿಶ್ರಮದ ಮೂಲಕ ಇಲ್ಲಿ ಯಶಸ್ಸನ್ನು ಸಾಧಿಸಬಹುದು. ಹಾಗೆಯೇ, ಹಣಕಾಸು ವ್ಯವಹಾರ, ಬ್ಯಾಂಕಿಂಗ್ ಮುಂತಾದ ವಿಭಾಗಗಳಲ್ಲೂ ಸಾಕಷ್ಟು ಅವಕಾಶಗಳಿವೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ವಾಣಿಜ್ಯ ವಿಭಾಗವು ದಿನನಿತ್ಯದ ವ್ಯವಹಾರದೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ವಿಭಾಗವಾಗಿದ್ದು, ನೀವು ಕಲಿತ ವಿದ್ಯೆ ನಿಮ್ಮ ನಿತ್ಯ ಜೀವನದಲ್ಲಿ ಉಪಯೋಗಕ್ಕೆ ಬರುತ್ತದೆ ಎಂದು ತಿಳಿಸಿದರು.

ಕಠಿಣ ಪರಿಶ್ರಮ ಮತ್ತು ಆಸಕ್ತಿಯಿಂದ ಕಲಿತು ಉತ್ತಮ ಅಂಕಗಳೊಂದಿಗೆ ಯಶಸ್ಸನ್ನು ಸಾಧಿಸಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ವೇದಿಕೆಯಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥ ಗೋವಿಂದ ಪ್ರಕಾಶ್ ಸಿ.ಎಚ್. ಉಪಸ್ಥಿತರಿದ್ದರು.

ಕಾಲೇಜಿನ ಬೋಧಕ/ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಪ್ರದರ್ಶನ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ವಿದ್ಯಾರ್ಥಿಗಳಾದ ಗುಣಿಕ ನಾಯಕ್ ಸ್ವಾಗತಿಸಿ, ಸ್ನೇಹಾ ವಂದಿಸಿದರು. ಸ್ವಿನಿಕಾ ವಿಯೋಲ ಕ್ರಾಸ್ತಾ ಕಾರ್ಯಕ್ರಮ ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article