ಸಂತ ಫಿಲೋಮಿನಾ ಕಾಲೇಜಿನ ಚಂದ್ರಶೇಖರ್ ಪದೋನ್ನತಿ
ಅವರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಪ್ರೊಫೆಸರ್ ಹುದ್ದೆಗೇರಿದ ಪ್ರಥಮ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದು, ಇವರು ತಮ್ಮ ಪಿಯುಸಿ ಹಾಗೂ ಬಿ.ಎಸ್ಸಿ ಪದವಿಯನ್ನು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಪಡೆದು ಮಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎಸ್ಸಿ ಹಾಗೂ ಪಿಎಚ್.ಡಿ ಪದವಿ ಪಡೆದಿದ್ದಾರೆ. ಉಪನ್ಯಾಸಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಇವರು, 2000ನೇ ಇಸವಿಯಲ್ಲಿ ಸಂತ ಫಿಲೋಮಿನಾ ಕಾಲೇಜಿನಲ್ಲಿ ಉಪನ್ಯಾಸಕರಾಗಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದರು.
‘ವೆಬ್ ಆಫ್ ಸೈನ್ಸ್’ನಂತಹ ಡೇಟಾಬೇಸ್ನಲ್ಲಿ ಅಡಕವಾಗಿರುವ ಪ್ರತಿಷ್ಠಿತ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ಅನೇಕ ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ. ವಿಜ್ಞಾನ ಮತ್ತು ಪರಿಸರ ಕ್ಷೇತ್ರಕ್ಕೆ ಸಂಬಂಧಿಸಿದ ಜರ್ನಲ್‌ಗೆ ರೆಫರಿಯಾಗಿ ಕಾರ್ಯನಿರ್ವಹಿಸುತ್ತಿರುವ ಅವರು ಸಂಪನ್ಮೂಲ ವ್ಯಕ್ತಿಯಾಗಿ ವಿವಿಧ ವೇದಿಕೆಗಳಲ್ಲಿ ವೈಜ್ಞಾನಿಕ ಮತ್ತು ಇತರ ಉಪನ್ಯಾಸಗಳನ್ನು ನೀಡಿದ್ದಾರೆ.
ಪ್ರಸ್ತುತ ಕಾಲೇಜಿನ ಎನ್.ಎಸ್.ಎಸ್ ಯೋಜನಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇತ್ತೀಚೆಗೆ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ನಡೆದ ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನ ಪ್ರತಿನಿಧಿಸಿದ್ದರು. ಇವರ ನಿಸ್ವಾರ್ಥ ಎನ್.ಎಸ್.ಎಸ್ ಚಟುವಟಿಕೆಗಳನ್ನು ಗುರುತಿಸಿ ಪುತ್ತೂರಿನ ಲಯನ್ಸ್ ಮತ್ತು ರೋಟರಿ ಕ್ಲಬ್‌ಗಳು ಅವರನ್ನು ಗೌರವಿಸಿವೆ.
ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಲಕ್ಷ್ಮಿ ಮತ್ತು ದಿ. ಮಹಾಲಿಂಗ ಮೂಲ್ಯ ಅವರ ಪುತ್ರ. ಡಾ. ಕೆ. ಚಂದ್ರಶೇಖರ್ ಅವರ ಈ ಸಾಧನೆಗೆ ಕಾಲೇಜಿನ ಸಂಚಾಲಕರಾದ ಅತೀ ವಂ. ಡಾ. ಜೆ.ಬಿ. ಸಲ್ದಾನ್ಹಾ, ಪ್ರಾಂಶುಪಾಲರಾದ ವಂ. ಡಾ. ಆಂಟನಿ ಪ್ರಕಾಶ್ ಮೊಂತೇರೊ, ಸಹೋದ್ಯೋಗಿಗಳು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.