ಸಂತ ಫಿಲೋಮಿನಾ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
Sunday, June 21, 2026
ಪುತ್ತೂರು: ಇಲ್ಲಿನ ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜು, ಮತ್ತು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಇದರ ಎನ್.ಸಿ.ಸಿ. ಭೂದಳ ಹಾಗೂ ನೌಕಾದಳ ಹಾಗೂ ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯ ಎನ್‌ಸಿಸಿ ಭೂದಳ ಹಾಗೂ ನೌಕಾದಳ ಘಟಕಗಳ ಸಹಯೋಗದೊಂದಿಗೆ ಅಂತರರಾಷ್ಟ್ರೀಯ ಯೋಗ ದಿನಾಚರಣೆ-2026 ಭಾನುವಾರ ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯ ಸಭಾಂಗಣದಲ್ಲಿ ಈ ವರ್ಷದ ಯೋಗ ದಿನದ ಧ್ಯೇಯವಾಕ್ಯ ‘ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ’ ಶೀರ್ಷಿಕೆಯೊಂದಿಗೆ ಆಚರಿಸಲಾಯಿತು.
ಕಾರ್ಯಕ್ರಮವನ್ನು ಮಾಯಿದೇ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಅತಿ ವಂದನೀಯ ಡಾ. ಜೆ.ಬಿ. ಸಲ್ದಾನ್ಹಾ ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿ ಅಧ್ಯಕ್ಷೀಯ ಆಶೀರ್ವಚನ ನೀಡಿ, ‘ನಮ್ಮ ಸಂಸ್ಥೆಗಳ ವಿದ್ಯಾರ್ಥಿಗಳು ಮತ್ತು ಎನ್.ಸಿ.ಸಿ. ಕೆಡೆಟ್’ಗಳು ಅತ್ಯುತ್ತಮ ಶಿಸ್ತು-ಸಂಯಮವನ್ನು ಪ್ರದರ್ಶಿಸುತ್ತಿರುವುದು ಮನಸ್ಸಿಗೆ ನೆಮ್ಮದಿ ನೀಡುತ್ತದೆ. ಯೋಗವು ಜಾತಿ, ಮತ, ಧರ್ಮಗಳ ಎಲ್ಲ ಭೇದಗಳನ್ನು ಮೀರಿ ಮನಸ್ಸು ಮತ್ತು ದೇಹವನ್ನು ಒಂದಾಗಿಸುತ್ತದೆ. ಇಂತಹ ಯೋಗ ದಿನಾಚರಣೆಗಳು ವಿದ್ಯಾರ್ಥಿಗಳಿಗೆ ಘನತೆಯುತ ಹಾಗೂ ಮೌಲ್ಯಯುತ ಜೀವನ ನಡೆಸಲು ಪ್ರೇರಣೆ ನೀಡುತ್ತವೆ’ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಫಾ. ಅಶೋಕ್ ರಾಯನ್ ಕ್ರಾಸ್ತಾ ಹಾಗೂ ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಫಾ. ಮ್ಯಾಕ್ಸಿಮ್ ಡಿ’ಸೋಜಾ ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಕಾಲೇಜು ಎನ್.ಸಿ.ಸಿ. ನೌಕಾದಳದ ಅಧಿಕಾರಿ ಸಬ್ ಲೆಫ್ಟಿನೆಂಟ್ ತೇಜಸ್ವಿ ಭಟ್ ಕೆ., ನಿರೂಪಿಸಿದರು. ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲಾ ಎನ್.ಸಿ.ಸಿ. ನೌಕಾದಳದ ಅಧಿಕಾರಿ ಕ್ಲೆಮೆಂಟ್ ಪಿಂಟೊ ವಂದಿಸಿದರು.
ಕ್ಯಾಪ್ಟನ್ ಜೋನ್ಸನ್ ಡೇವಿಡ್ ಸಿಕ್ವೇರಾ, ಎನ್.ಸಿ.ಸಿ. ಭೂದಳ ಅಧಿಕಾರಿ, ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ನೇತೃತ್ವದಲ್ಲಿ ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲಾ ಎನ್.ಸಿ.ಸಿ ಭೂದಳ ಅಧಿಕಾರಿ ಪೀಟರ್ ನರೇಶ್ ಲೋಬೊ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಯೋಗ ದಿನಾಚರಣೆಯ ಅಂಗವಾಗಿ ವಿವಿಧ ಯೋಗಾಸನಗಳು ಹಾಗೂ ಪ್ರಾಯೋಗಿಕ ಯೋಗಾಭ್ಯಾಸಗಳನ್ನು ನಡೆಸಿ ದೈಹಿಕ ಆರೋಗ್ಯ, ಮಾನಸಿಕ ನೆಮ್ಮದಿ ಹಾಗೂ ಸಾಮಾಜಿಕ ಸೌಹಾರ್ದತೆಯ ಮಹತ್ವವನ್ನು ಎನ್.ಸಿ.ಸಿ. ಕೆಡೆಟ್‌ಗಳಿಗೆ ಮನವರಿಕೆ ಮಾಡಿಕೊಡಲಾಯಿತು.
ಈ ಕಾರ್ಯಕ್ರಮದಲ್ಲಿ 150ಕ್ಕೂ ಅಧಿಕ ಎನ್‌ಸಿಸಿ ಕೆಡೆಟ್‌ಗಳು ಭಾಗವಹಿಸಿ ಯೋಗದ ಮಹತ್ವವನ್ನು ಅರಿತುಕೊಂಡರು.



