ಮೊಬೈಲ್ ಬಳಸದಂತೆ ಹೇಳಿದಕ್ಕೆ ಮನೆ ಬಿಟ್ಟ ಬಾಲಕ

ಮೊಬೈಲ್ ಬಳಸದಂತೆ ಹೇಳಿದಕ್ಕೆ ಮನೆ ಬಿಟ್ಟ ಬಾಲಕ

ಸುಳ್ಯ: ಮೊಬೈಲ್ ಬಳಸದಂತೆ ತಾಯಿ ಬೈದು ಬುದ್ಧಿಮಾತು ಹೇಳಿದ್ದಕ್ಕೆ ಬೇಸತ್ತು ಹದಿನಾರು ವರ್ಷದ ಬಾಲಕನೊಬ್ಬ ಮನೆಯಿಂದ ಹೊರಹೋಗಿ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಸುಳ್ಯ ಕಸಬಾ ಗ್ರಾಮದ ಬೋರುಗುಡ್ಡೆ ಎಂಬಲ್ಲಿ ನಡೆದಿದೆ. 

ನಾಪತ್ತೆಯಾದ ಬಾಲಕನನ್ನು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಿವಾಸಿ. ಪ್ರಸ್ತುತ ಸುಳ್ಯದ ಬೋರುಗುಡ್ಡೆಯಲ್ಲಿ ಪೋಷಕರೊಂದಿಗೆ ವಾಸವಿದ್ದ ಸೈಯದ್ ಆಲಿ ಸೈಯದ್ ಗೌಸ (16) ಎಂದು ಗುರುತಿಸಲಾಗಿದೆ. ಈ ಸಂಬಂಧ ಬಾಲಕನ ತಾಯಿ ಸಲ್ಮಾ ಅವರು ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 

ಸಲ್ಮಾ ಪತಿ ಹಾಗೂ ಮಗ ಸೈಯದ್ ಆಲಿ ಸೈಯದ್ ಗೌಸನೊಂದಿಗೆ ಸುಳ್ಯ ಕಸಬಾ ಗ್ರಾಮದ ಬೋರುಗುಡ್ಡೆಯಲ್ಲಿ ವಾಸವಾಗಿದ್ದಾರೆ. ಮೇ 30, ರಂದು ಬೆಳಗ್ಗೆ ಬಾಲಕ ಸೈಯದ್ ಆಲಿ ಸತತವಾಗಿ ಮೊಬೈಲ್ ನೋಡುತ್ತಿದ್ದ ಎನ್ನಲಾಗಿದೆ. ಈ ವಿಚಾರವಾಗಿ ತಾಯಿ ಸಲ್ಮಾ ಮಗನಿಗೆ ಬೈದು, ಮೊಬೈಲ್ ಹವ್ಯಾಸ ಬಿಡುವಂತೆ ಬುದ್ಧಿಮಾತು ಹೇಳಿದ್ದರು. ಇದರಿಂದ ಮನಸ್ತಾಪ ಮಾಡಿಕೊಂಡ ಬಾಲಕ, ಸ್ವಲ್ಪ ಸಮಯದ ಬಳಿಕ ಯಾರಿಗೂ ಹೇಳದೆ ಮನೆಯಿಂದ ಹೊರಹೋಗಿದ್ದಾನೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article