ಸುಳ್ಯದಲ್ಲಿ ಹಲಸು ಮಾವು ಮೇಳಕ್ಕೆ ಚಾಲನೆ: ಹಲಸು ಸಂಶೋಧನಾ ಕೇಂದ್ರ ಸ್ಥಾಪನೆ: ಶ್ರೀಪಡ್ರೆ ಆಗ್ರಹ
ಟೀಮ್ ಉಬಾರ್, ಸುಳ್ಯ ರೈತ ಉತ್ಪಾದಕ ಕಂಪೆನಿ ಸುಳ್ಯ, ಪ್ರಣವ ಸೌಹಾರ್ದ ಸಹಕಾರಿ ಸಂಘ ಮತ್ತು ಸುದ್ದಿ ಕೃಷಿ ಅರಿವು ಕೇಂದ್ರ ಇವರ ಜಂಟಿ ಆಶ್ರಯದಲ್ಲಿ ಸ್ಥಳೀಯ ತಾಲೂಕು ಆಡಳಿತ,ತಾಲೂಕು ಪಂಚಾಯತ್, ಕೃಷಿ ಸಂಬಂಧಿತ ಸರಕಾರಿ ಇಲಾಖೆಗಳು ಹಾಗೂ ಸಹಕಾರಿ ಸಂಘಗಳು, ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸುಳ್ಯದ ಕೇರ್ಪಳ ಶ್ರೀ ದುರ್ಗಾಪರಮೇಶ್ವರಿ ಕಲಾ ಮಂದಿರದ ವಠಾರದಲ್ಲಿ ಏರ್ಪಡಿಸಲಾದ 3 ದಿನಗಳ ಹಲಸು ಮತ್ತು ಮಾವು ಮೇಳದ ಉದ್ಘಾಟನಾ ಸಮಾರಂಭದಲ್ಲಿ ಅತಿಥಿಯಾಗಿ ಅವರು ಮಾತನಾಡಿದರು.
ಹಲಸು ಮಾವು ಮೇಳವನ್ನು ಸುದ್ದಿ ಮಾಧ್ಯಮ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಹಾಗೂ ಹಲಸು ಮಾವು ಮೇಳದ ಗೌರವ ಮಾರ್ಗದರ್ಶಕ ಡಾ.ಯು.ಪಿ ಶಿವಾನಂದ ಉದ್ಘಾಟಿಸಿದರು. ’ಕೃಷಿಯ ಮೌಲ್ಯವರ್ಧನೆ ಮಾಡಿಕೊಳ್ಳುವ ಮೂಲಕ ಕೃಷಿಕರ ಬದುಕನ್ನು ಮೌಲ್ಯವರ್ಧನೆ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.
ಹಲಸು ಮಾವು ಮೇಳದ ಸ್ಟಾಲ್‌ಗಳನ್ನು ಸುಳ್ಯ ತಹಶೀಲ್ದಾರ್ ಮಂಜುಳಾ ಎಂ. ಉದ್ಘಾಟಿಸಿದರು.
ಹಲಸು ಮಾವು ಮೇಳ ಸಮಿತಿಯ ಗೌರವಾಧ್ಯಕ್ಷ, ಪ್ರಣವ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಜಿ.ಆರ್. ಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪುರಸ್ಕೃತರಾದ ಡಾ.ಗಿರೀಶ್ ಭಾರದ್ವಾಜ್, ವಿಧಾನ ಪರಿಷತ್ ಮಾಜಿ ಸದಸ್ಯ ಅಣ್ಣಾ ವಿನಯಚಂದ್ರ, ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಫ, ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸಿಇಒ ಜ್ಯೋತಿರಾಜ್, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಪ್ರಮೋದ್ ಸಿ.ಎಂ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಗುರುಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸುಳ್ಯ ರೈತ ಉತ್ಪಾದಕ ಕಂಪೆನಿಯ ಅಧ್ಯಕ್ಷ ಹಾಗೂ ಹಲಸು ಮಾವು ಮೇಳ ಸಂಘಟನಾ ಸಮಿತಿಯ ಅಧ್ಯಕ್ಷ ವೀರಪ್ಪ ಗೌಡ ಕಣ್ಕಲ್ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಜಯರಾಮ ಮುಂಡೋಳಿಮೂಲೆ ವಂದಿಸಿದರು. ಕೃಷಿ ಸಖಿ ಮೋಹಿನಿ ವಿಶ್ವನಾಥ್ (ನಿಶಾ) ಹಾಗು ಯಶ್ವಿತ್ ಕಾಳಂಮನೆ ಕಾರ್ಯಕ್ರಮ ನಿರೂಪಿಸಿದರು.