ಹೆಗ್ಗಡೆ ದಂಪತಿಗಳು ಬೆಳ್ತಂಗಡಿಯ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್‌ಗೆ ಭೇಟಿ
ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ವಿವಿಧ ಉತ್ಪಾದನಾ ವಿಭಾಗಗಳಿಗೆ ಭೇಟಿ ನೀಡಿ, ಅಲ್ಲಿನ ಉತ್ಪಾದನಾ ಚಟುವಟಿಕೆಗಳನ್ನು ವೀಕ್ಷಿಸಿದ ಹೆಗ್ಗಡೆ ದಂಪತಿಗಳು, ಸಿಬ್ಬಂದಿಗಳ ಕಾರ್ಯನಿಷ್ಠೆ ಹಾಗೂ ಸೇವಾ ಮನೋಭಾವವನ್ನು ಶ್ಲಾಘಿಸಿ ಶುಭ ಹಾರೈಸಿದರು.
ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ಧನ ಅವರು ಹೆಗ್ಗಡೆ ದಂಪತಿಗಳನ್ನು ಹಾಗೂ ಹೆಗ್ಗಡೆಯವರ ಮೊಮ್ಮಗಳು ಮಾನ್ಯ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.
ಬಡ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣದ ಮಹೋದ್ದೇಶದಿಂದ ಸಿರಿ ಸಂಸ್ಥೆಗೆ ಸುಸಜ್ಜಿತ ಹಾಗೂ ಭವ್ಯ ನೂತನ ಕಟ್ಟಡವನ್ನು ನಿರ್ಮಿಸಿಕೊಟ್ಟು, ಸಿಬ್ಬಂದಿಗಳಿಗೆ ಅಗತ್ಯವಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಅವರ ಶ್ರೇಯೋಭಿವೃದ್ಧಿಗೆ ಸದಾ ಪ್ರೋತ್ಸಾಹ ನೀಡುತ್ತಿರುವ ಹೆಗ್ಗಡೆ ದಂಪತಿಯವರಿಗೆ ಕೃತಜ್ಞತೆಗಳನ್ನು ಸಲ್ಲಿಸಿ, ಸಿರಿ ಸಂಸ್ಥೆಯ ವತಿಯಿಂದ ಗೌರವಾರ್ಪಣೆ ಸಮರ್ಪಿಸಲಾಯಿತು.
ಸೇಲಂನಲ್ಲಿರುವ ಇಸ್ಕಾನ್ ದೇವಾಲಯದ ರಾಮಪ್ರಭು ಚಂದನದಾಸ ಸ್ವಾಮೀಜಿ, ರಾಜೇಶ್ ಪೈ, ಡಾ. ಹರೀಶ್ ಕೃಷ್ಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.