ನಾಳೆ ಧರ್ಮಸ್ಥಳದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ನಾಳೆ ಧರ್ಮಸ್ಥಳದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಉಜಿರೆ: ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಕಾಲೇಜಿನ ಆಶ್ರಯದಲ್ಲಿ ಭಾನುವಾರ ಬೆಳಗ್ಗೆ ಏಳು ಗಂಟೆಯಿಂದ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಹನ್ನೆರಡನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದೆ.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭವನ್ನು ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿ.ವಿ. ಉಪಕುಲಪತಿ ಡಾ. ಭಗವಾನ್, ಬಿ.ಸಿ. ಉದ್ಘಾಟಿಸುವರು. ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಶಾಸಕರುಗಳಾದ ಹರೀಶ್ ಪೂಂಜ, ಕೆ. ಪ್ರತಾಪಸಿಂಹ ನಾಯಕ್ ಮುಖ್ಯ ಅತಿಥಿಗಳಾಗಿ ಶುಭಾಶಂಸನೆ ಮಾಡುವರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article