ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ವಿವಾದ: ಬೇಲೂರು ಶಾಸಕ ಎಚ್.ಕೆ. ಸುರೇಶ್ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ವಿವಾದ: ಬೇಲೂರು ಶಾಸಕ ಎಚ್.ಕೆ. ಸುರೇಶ್ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ


ಉಜಿರೆ: ರಾಜ್ಯ ವಿಧಾನಪರಿಷತ್ ಚುನಾವಣೆಯಲ್ಲಿ ಬಿ.ಜೆ.ಪಿ. ವಲಯದಲ್ಲಿ ಅಡ್ಡಮತದಾನದ ಬಗ್ಗೆ ತೀವ್ರ ಚರ್ಚೆಯಾಗುತ್ತಿದ್ದಂತೆ ಮಂಗಳವಾರ ಬೇಲೂರು ಶಾಸಕ ಎಚ್.ಕೆ. ಸುರೇಶ್ ಮುನ್ನೂರಕ್ಕೂ ಮಿಕ್ಕಿ ಬೆಂಬಲಿಗರೊಂದಿಗೆ ನೂರಕ್ಕೂ ಮಿಕ್ಕಿ ಕಾರುಗಳಲ್ಲಿ ಧರ್ಮಸ್ಥಳಕ್ಕೆ ಬಂದರು.


ಈ ಸಂದರ್ಭದಲ್ಲಿ ಶಾಸಕರು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದರು.

ದೇವರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿ, ತನ್ನ ಮೇಲೆ ಅಪಪ್ರಚಾರ ಮಾಡಿದವರಿಗೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದರು. ಹುಂಡಿಗೆ ಕಾಣಿಕೆ ಹಾಕಿದರು.

“ನಾನು ಬಿ.ಜೆ.ಪಿ. ನಿಷ್ಠಾವಂತ ಕಾರ್ಯಕರ್ತನಾಗಿದ್ದು ಪಕ್ಷಕ್ಕೆ ದ್ರೋಹ ಮಾಡಿಲ್ಲ. ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿಲ್ಲ. ಪಕ್ಷದ ವರಿಷ್ಠರು ಸೂಚಿಸಿದ ವ್ಯಕ್ತಿಗೆ ಮತದಾನ ಮಾಡಿದ್ದೇನೆ ಎಂದು ಮಂಜುನಾಥಸ್ವಾಮಿ ಸನ್ನಿಧಿಯಲ್ಲಿ ಪ್ರಮಾಣ ಮಾಡುತ್ತೇನೆ” ಎಂದು ಅವರು ಹೇಳಿದರು.

ನನ್ನ ಬೆಳವಣಿಗೆಯನ್ನು ಸಹಿಸದ ಕೆಲವರು ಆಧಾರರಹಿತ ಆರೋಪ ಮಾಡುತ್ತಿದ್ದಾರೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

ದೇವಸ್ಥಾನಕ್ಕೆ ಹೋಗುವ ಮೊದಲು ಅಣ್ಣಪ್ಪಸ್ವಾಮಿ ಬೆಟ್ಟದಲ್ಲಿ ವಿಶೇಷ ಪ್ರಾರ್ಥನೆ ಮಾಡಿ, ನಾನು ಮೋಸ ಮಾಡಿಲ್ಲ. ಅಪಪ್ರಚಾರ ಮಾಡಿದವರಿಗೆ ದೇವರು ಒಳ್ಳೆಯ ಬುದ್ಧಿ ಕೊಡಲಿ ಎಂದು ಹೇಳಿ ತೆಂಗಿನ ಕಾಯಿ ಒಡೆದರು.

ಬರುವಾಗ ನೇತ್ರಾವತಿಯಲ್ಲಿ ತೀರ್ಥ ಪ್ರೋಕ್ಷಣೆ ಮಾಡಿ, ವಂದಿಸಿ, ಬಳಿಕ ದೇವರ ದರ್ಶನ ಮಾಡಿ, ಪೂಜೆ ಸಲ್ಲಿಸಿ ಶಾಸಕರು ಕಾರ್ಯಕರ್ತರ ಜೊತೆ ಆಣೆ ಪ್ರಮಾಣ ಮಾಡಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article