ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಉಳ್ಳಾಲ: ಪ್ರಥಮ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯೊಳಗೆ ನೇಣುಬಿಗಿದು ಆತ್ಮಹತ್ಯೆಗೈದ ಘಟನೆ ಭಾನುವಾರ ಸಂಜೆ ಸೋಮೇಶ್ವರ ಬಸ್ಸು ತಂಗುದಾಣದ ಬಳಿ ನಡೆದಿದೆ.

ಸೋಮೇಶ್ವರ ಬಸ್ಸು ತಂಗುದಾಣದ ಬಳಿಯ ನಿವಾಸಿ ಸಮನ್ವಿ ಎಲ್ (16) ಆತ್ಮಹತ್ಯೆಗೈದ ವಿದ್ಯಾರ್ಥಿನಿ.

ಸೋಮೇಶ್ವರದ ಖಾಸಗಿ ವಿದ್ಯಾ ಸಂಸ್ಥೆಯಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಸಮನ್ವಿ ಭರತ ನಾಟ್ಯ ಕಲಾವಿದೆಯಾಗಿದ್ದಳು. ಭಾನುವಾರ ಸಂಜೆ ಸ್ನಾನಕ್ಕೆಂದು ಕೋಣೆಗೆ ಸೇರಿದ ಸಮನ್ವಿ ಎಷ್ಟು ಹೊತ್ತಾದರೂ ಹೊರಬಾರದೆ ಇದ್ದಾಗ ಮನೆ ಮಂದಿ ಮನೆಯ ಬಾಗಿಲು ಮುರಿದು ಒಳ ನುಗ್ಗಿದಾಗ ಆತ್ಮಹತ್ಯೆ ನಡೆಸಿರೋದು ಬೆಳಕಿಗೆ ಬಂದಿದೆ. ಸಮನ್ವಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಉಳ್ಳಾಲ ಠಾಣಾ ಪೊಲೀಸರು ಮೃತ ದೇಹವನ್ನ ಮರಣೋತ್ತರ ಪರೀಕ್ಷೆ ನಡೆಸಿ,ಪ್ರಕರಣ ದಾಖಲಿಸಿದ್ದಾರೆ.

ಮೃತ ಸಮನ್ವಿ ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾಳೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article