ಬಂಟ್ವಾಳದಲ್ಲಿ ಸರಣಿ ಅಪಘಾತ

ಬಂಟ್ವಾಳದಲ್ಲಿ ಸರಣಿ ಅಪಘಾತ


ಬಂಟ್ವಾಳ: ಇಲ್ಲಿಗೆ ಸಮೀಪದ ಭಂಡಾರಿಬೆಟ್ಟು ಸಮೀಪ ಅಂಬ್ಯುಲೆನ್ಸ್ ವಾಹನಕ್ಕೆ ದಾರಿ ಬಿಡುವ ವೇಳೆ ಮೂರು ವಾಹನಗಳು ಪರಸ್ಪರ ಢಿಕ್ಕಿ ಹೊಡೆದ ಘಟನೆ ನಡೆದಿದ್ದು, ಅದೃಷ್ಟವಶಾತ್ ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಸೈರನ್ ಹಾಕಿಕೊಂಡು ತುರ್ತು ಚಿಕಿತ್ಸೆಗೆ ತೆರಳುತ್ತಿದ್ದ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡುವ ನಿಟ್ಟಿನಲ್ಲಿ ಮುಂಭಾಗದಲ್ಲಿ ಸಂಚರಿಸುತ್ತಿದ್ದ ಪಿಕಪ್ ವಾಹನ ಹಾಗೂ ಕಾರಿನ ಚಾಲಕರು ತಮ್ಮ ವಾಹನವನ್ನು ಬದಿಗೆ ಸರಿಸಲು ಪ್ರಯತ್ನಿಸಿದ್ದಾರೆ.

ಇದೇ ವೇಳೆ ಹಿಂದಿನಿಂದ ಬರುತ್ತಿದ್ದ ಸರಕಾರಿ ಬಸ್ ನಿಯಂತ್ರಿಸಲಾಗದೆ ಕಾರಿಗೆ ಢಿಕ್ಕಿ ಹೊಡೆದಿದೆ, ಕಾರು ಮುಂದಿದ್ದ ಪಿಕಪ್ ವಾಹನಕ್ಕೆ ಢಿಕ್ಕಿ ಹೊಡೆದಿದೆ.

ಘಟನೆಯಿಂದ ಮೂರು ವಾಹನಗಳಿಗೂ ಹಾನಿಯಾಗಿದ್ದು, ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಘಟನೆಯಿಂದ ಕೆಲಕಾಲ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಸ್ಥಳಕ್ಕಾಗಮಿಸಿದ ಬಂಟ್ವಾಳ ಸಂಚಾರ ಪೊಲೀಸರು ವಾಹನಗಳನ್ನು ತೆರವುಗೊಳಿಸಿ ಇತರ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article