ಮತದಾರರ ಹಕ್ಕು ರಕ್ಷಣೆಗಾಗಿ ಕಾರ್ಯಕರ್ತರು ಜಾಗೃತಿ ಮೂಡಿಸಿ: ಬಿ. ರಮಾನಾಥ ರೈ
ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಇರ್ವತ್ತೂರು, ಸಂಗಬೆಟ್ಟು ಮತ್ತು ಕುಕ್ಕಿಪಾಡಿ,ಪಂಜಿಕಲ್ಲು ಗ್ರಾಮ ಪಂಚಾಯತ್ ವಲಯ ಕಾಂಗ್ರೆಸ್ ಸಮಿತಿಗಳ ಆಶ್ರಯದಲ್ಲಿ ನಡೆದ ಎಸ್.ಐ.ಆರ್. ಜಾಗೃತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಸ್.ಐ.ಆರ್. ಪ್ರಕ್ರಿಯೆಯ ಬಗ್ಗೆ ಸಾರ್ವಜನಿಕರಲ್ಲಿ ಇನ್ನಷ್ಟು ಜಾಗೃತಿ ಅಗತ್ಯವಿದೆ. ಯಾವುದೇ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಕೈತಪ್ಪದಂತೆ ಕಾಂಗ್ರೆಸ್ ಪಕ್ಷದ ಬಿಎಲ್‌ಓಗಳು ಹಾಗೂ ಕಾರ್ಯಕರ್ತರು ಮನೆಮನೆಗೆ ಭೇಟಿ ನೀಡಿ ಮಾಹಿತಿ ನೀಡಬೇಕು. ಮತದಾನದ ಹಕ್ಕು ಪ್ರತಿಯೊಬ್ಬ ಪ್ರಜೆಯ ಮೂಲಭೂತ ಹಕ್ಕಾಗಿದ್ದು, ಅದರ ರಕ್ಷಣೆಗೆ ಎಲ್ಲರೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್. ಅಂಚನ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ಭಂಡಾರಿ,ಬೂಡಾ ಅಧ್ಯಕ್ಷ ಬೇಬಿ ಕುಂದರ್, ವಲಯ ಕಾಂಗ್ರೆಸ್ ಅಧ್ಯಕ್ಷರಾದ ನಜೀಬ್ ಸಾಹೇಬ್, ಅಬ್ಬಾಸ್ ಅಲಿ, ಶೀತಾರಾಮ್ ಶಾಂತಿ, ಗಣೇಶ್ ನಾಯ್ಕ್, ಜಯಕರ ಶೆಟ್ಟಿ, ಭೂ ಬ್ಯಾಂಕ್ ಮಾಜಿ ಅಧ್ಯಕ್ಷ ಸುದರ್ಶನ್ ಜೈನ್, ವಲಯ ಅಧ್ಯಕ್ಷರಾದ ರವಿ ಪೂಜಾರಿ, ಮೋಹನ್ ಶೆಟ್ಟಿ ಪಂಜಿಕಲ್ಲು, ದೇವಪ್ಪ ಕುಲಾಲ್, ರಾಜೇಶ್ ಗೌಡ, ಬಿ.ಎಲ್.ಎ.ಗಳು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.