ಶಾಸಕ ರಾಜೇಶ್ ನಾಯ್ಕ್ ನಿವಾಸಕ್ಕೆ ಬಿಎಲ್‌ಒಗಳ ಭೇಟಿ ಎಸ್‌ಐಆರ್ ನೋಂದಣಿ

ಶಾಸಕ ರಾಜೇಶ್ ನಾಯ್ಕ್ ನಿವಾಸಕ್ಕೆ ಬಿಎಲ್‌ಒಗಳ ಭೇಟಿ ಎಸ್‌ಐಆರ್ ನೋಂದಣಿ


ಬಂಟ್ವಾಳ: ಚುನಾವಣಾ ಆಯೋಗದ ಎಸ್‌ಐಆರ್ ಪ್ರಕ್ರಿಯೆಯ ಅಂಗವಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗಂಜಿಮಠದ ಒಡ್ಡೂರು ಫಾಮ್೯ ಹೌಸ್ ನಿವಾಸಕ್ಕೆ ಸೋಮವಾರ ಬಿಎಲ್‌ಒಗಳು ಭೇಟಿ ನೀಡಿ ಅಗತ್ಯ ದಾಖಲೆಗಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಶಾಸಕರು ಹಾಗೂ ಕುಟುಂಬಸ್ಥರು ಎಸ್‌ಐಆರ್ ಪ್ರಕ್ರಿಯೆಗೆ ಸಂಪೂರ್ಣ ಸಹಕಾರ ನೀಡಿ, ಚುನಾವಣಾ ಆಯೋಗದ ನಿರ್ದೇಶನದಂತೆ ಅಗತ್ಯ ಮಾಹಿತಿಯನ್ನು ಅಧಿಕಾರಿಗಳಿಗೆ ಒದಗಿಸಿದರು.

ಪ್ರತಿಯೊಬ್ಬ ಅರ್ಹ ಮತದಾರರು ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ, ಚುನಾವಣಾ ಆಯೋಗದ ಸೂಚನೆಯಂತೆ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಸಹಕರಿಸುವಂತೆ ಶಾಸಕ ರಾಜೇಶ್ ನಾಯ್ಕ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಎಸ್‌ಐಆರ್ ಪ್ರಕ್ರಿಯೆಯು ಮತದಾರರ ಪಟ್ಟಿಯನ್ನು ಮತ್ತಷ್ಟು ನಿಖರ ಹಾಗೂ ವಿಶ್ವಾಸಾರ್ಹಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದ್ದು, ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ ಎಂದು ಅವರು ತಿಳಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article