ಗಾಂಜಾ ಸೇವನೆ: ಇಬ್ಬರ ಬಂಧನ
Monday, July 13, 2026
ಬಂಟ್ವಾಳ: ಪಾಣೆಮಂಗಳೂರು ಗ್ರಾಮದ ಬಂಗ್ಲೆಗುಡ್ಡೆ ರಸ್ತೆ ಬದಿ ಹಾಗೂ ಮೆಲ್ಕಾರ್ನಲ್ಲಿ ಅಮಲುಪದಾರ್ಥ ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ನಶೆಯಿಂದ ಅಸಭ್ಯವಾಗಿ ವರ್ತಿಸುತ್ತಿದ್ದ ಇಬ್ಬರ ವಿರುದ್ಧ ಪ್ರತ್ಯೇಕ ಪ್ರಕರಣ ಬಂಟ್ವಾಳ ನಗರ ಠಾಣೆಯಲ್ಲಿ ದಾಖಲಾಗಿದೆ.
ಶನಿವಾರ ರಾತ್ರಿ ಬಂಟ್ವಾಳ ನಗರ ಪೊಲೀಸ್ ಠಾಣೆಯ ಎಸ್ಐ ಮತ್ತವರ ಸಿಬ್ಬಂದಿಗಳು ಗಸ್ತಿನಲ್ಲಿದ್ದ ವೇಳೆ ಖಚಿತ ಮಾಹಿತಿಯ ಮೇರೆಗೆ ಪಾಣೆಮಂಗಳೂರು ಹಾಗೂ ಮೆಲ್ಕಾರ್ನಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ.
ಮೊದಲ ಪ್ರಕರಣದಲ್ಲಿ ಮಹಮ್ಮದ್ ಜಲೀಲ್ (37) ಬಂಧಿತನಾಗಿದ್ದರೆ.ಮೆಲ್ಕಾರ್ ನಲ್ಲಿ ಮಹಮ್ಮದ್ ಅಜೀಮ್ (29) ಎಂಬವರಿಬ್ಬರನ್ನು ಬಂಧಿಸಿದ್ದಾರೆ.
ಈ ಇಬ್ಬರನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಗಾಂಜಾ ಸೇವಿಸಿರುವುದು, ದೃಢಪಟ್ಟ ಹಿನ್ನಲೆಯಲ್ಲಿ ಇಬ್ಬರ ವಿರುದ್ಧ ಬಂಟ್ವಾಳ ನಗರ ಪೊಲೀಸರು ಪ್ರತ್ಯೇಪ್ರತ್ಯೇಕ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.