ನರಹರಿ ಬಳಿ ರಸ್ತೆ ಅಪಘಾತಕ್ಕೆ ಬೈಕ್ ಸವಾರ ಬಲಿ

ನರಹರಿ ಬಳಿ ರಸ್ತೆ ಅಪಘಾತಕ್ಕೆ ಬೈಕ್ ಸವಾರ ಬಲಿ


ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ನರಹರಿ ಪರ್ವತದ ಮುಂಭಾಗದಲ್ಲಿ ಭಾನುವಾರ ಸಂಜೆ ಮಾರುತಿ ಸ್ವಿಫ್ಟ್ ಡಿಸೈರ್ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತರನ್ನು ಪುತ್ತೂರು ನಿವಾಸಿ ಅಶೋಕ್ (34) ಎಂದು ಗುರುತಿಸಲಾಗಿದೆ.

ಬಿ.ಸಿ. ರೋಡ್ ಕಡೆಗೆ ಸಂಚರಿಸುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರಿಗೆ ಎದುರಿನಿಂದ ರಾಂಗ್ ಸೈಡ್‌ನಲ್ಲಿ ಬಂದ ಬೈಕ್ ಮುಖಾಮುಖಿ ಢಿಕ್ಕಿ ಹೊಡೆದಿದೆ.

ಢಿಕ್ಕಿಯ ರಭಸಕ್ಕೆ ಮಾರುತಿ ಕಾರಿನ ಮುಂಭಾಗದ ಬಾನೆಟ್, ಗ್ರಿಲ್ ಹಾಗೂ ಇಂಜಿನ್ ಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಮುಂಭಾಗದ ಗಾಜು ಪುಡಿಯಾಗಿದೆ. ಬೈಕ್‌ನ ಮುಂಭಾಗವೂ ಸಂಪೂರ್ಣ ಜಖಂಗೊಂಡಿದೆ.

ಅಪಘಾತದಲ್ಲಿ ಗಂಭೀರ ಸ್ವರೂಪದ ಗಾಯಗೊಂಡಿದ್ದ ಅಶೋಕ್ ಅವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯಿಂದಾಗಿ ಹೆದ್ದಾರಿಯಲ್ಲಿ ಸಂಚಾರದಲ್ಲು ಅಡಚಣೆ ಉಂಟಾಯಿತು. ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಇತರ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. 

ಈ ಸಂಬಂಧ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article