ಪಾದಚಾರಿಗೆ ಬಸ್ ಢಿಕ್ಕಿ: ಗಂಭೀರ ಗಾಯ
Saturday, July 11, 2026
ಬಂಟ್ವಾಳ: ತಾಲೂಕಿನ ಕಾವಳಪಡೂರು ಗ್ರಾಮದ ಮದ್ವ ಕೈಲಾರ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪಾದಚಾರಿ ಯುವತಿಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಧರ್ಮಸ್ಥಳ ಕಡೆಯಿಂದ ಬಿ.ಸಿ. ರೋಡ್‌ನತ್ತ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹೆದ್ದಾರಿಯನ್ನು ದಾಟುತ್ತಿದ್ದ ಮುನಿಝಾ ಅವರಿಗೆ ಢಿಕ್ಕಿ ಹೊಡೆದಿದೆ.
ಪರಿಣಾಮ ಮುನಿಝಾ ಅವರು ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಇವರನ್ನು ತಕ್ಷಣ ತುಂಬೆಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.
ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.