ಗಾಯಾಳು ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಗಾಯಾಳು ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಬಂಟ್ವಾಳ: ಬಿ.ಸಿ.ರೋಡ್-ಕಡೂರು ರಾಷ್ಟ್ರೀಯ ಹೆದ್ದಾರಿಯ ಮಣಿಹಳ್ಳ ಎಂಬಲ್ಲಿ ಜುಲೈ 28ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ದ್ವಿಚಕ್ರವಾಹನದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತರನ್ನು ಸುಂದರ ಪೂಜಾರಿ ಎಂದು ಗುರುತಿಸಲಾಗಿದೆ. ಬಿ.ಸಿ. ರೋಡ್‌ನಿಂದ ಬೆಳ್ತಂಗಡಿಯತ್ತ ಮೋಟಾರ್ ಸೈಕಲ್ ಅನ್ನು ಯತೀಶ್ ಎಂಬವರು ಚಲಾಯಿಸುತ್ತಿದ್ದ ವೇಳೆ ಸೂಚನೆ ನೀಡದೆ ಏಕಾಏಕಿ ರಸ್ತೆಯ ಬಲಭಾಗಕ್ಕೆ ತಿರುಗಿಸಿದಾಗ ಹಿಂಬದಿಯಿಂದ ಬರುತ್ತಿದ್ದ ಮೋಟಾರ್ ಸೈಕಲ್‌ಗೆ ಅಡ್ಡವಾಗಿ ಬಂದು ಢಿಕ್ಕಿ ಹೊಡೆದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಪರಿಣಾಮ ಮೋಟಾರ್ ಸೈಕಲ್ ಸವಾರ ಶಿವಾನಂದ ಹಾಗೂ ಹಿಂಬದಿಯಲ್ಲಿದ್ದ ಅವರ ತಂದೆ ಸುಂದರ ಪೂಜಾರಿ ರಸ್ತೆಗೆ ಬಿದ್ದಿದ್ದು, ಸವಾರ ಶಿವಾನಂದ ಅವರಿಗೆ ಗಾಯಗಳಾಗಿದ್ದರೆ, ಸುಂದರ ಪೂಜಾರಿ ಅವರು ಗಂಭೀರ ಗಾಯಗೊಂಡಿದ್ದರು. ಗಾಯಾಳುಗಳನ್ನು ತಕ್ಷಣ ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸುಂದರ ಪೂಜಾರಿ ಅವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article