ಸ್ಕೂಟರ್ ಸ್ಕಿಡ್ ಆಗಿ ಬಿದ್ದ ಗಾಯಾಳು ಮೃತ್ಯು

ಸ್ಕೂಟರ್ ಸ್ಕಿಡ್ ಆಗಿ ಬಿದ್ದ ಗಾಯಾಳು ಮೃತ್ಯು

ಬಂಟ್ವಾಳ: ಮೂರು ತಿಂಗಳ ಹಿಂದೆ ಸ್ಕೂಟರ್ ಸ್ಕಿಡ್ ಆಗಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸಂಭವಿಸಿದೆ.

ಮೃತಪಟ್ಟವರನ್ನು ಲಕ್ಷ್ಮಣ ಸಪಲ್ಯ ಎಂದು ಗುರುತಿಸಲಾಗಿದೆ. 

ಇವರು ಎ.13ರಂದು ತುಂಬೆ ಸಮೀಪ ಸಂಚರಿಸುವಾಗ ಸ್ಕೂಟರ್ ಸ್ಕಿಡ್ ಆಗಿ ಬಿದ್ದು ತಲೆ ಹಾಗೂ ಕಾಲಿಗೆ ತೀವ್ರ ಸ್ವರೂಪದ ಗಾಯಗಳಾಗಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬಳಿಕ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಸುಮಾರು 1 ತಿಂಗಳು ಚಿಕಿತ್ಸೆ ಪಡೆದುಕೊಂಡಿದ್ದರು. ಲಕ್ಷ್ಮಣ ಸಪಲ್ಯ ಅವರು ಸ್ವತಃ ಸ್ಕೂಟರ್‌ನಿಂದ ಬಿದ್ದು ಗಾಯಗೊಂಡಿರುವ ಹಿನ್ನೆಲೆಯಲ್ಲಿ ಆಗ ಪೊಲೀಸರಿಗೆ ದೂರು ನೀಡಿರಲಿಲ್ಲ. ಆದರೆ ಅವರು ಚಿಕಿತ್ಸೆಯಲ್ಲಿದ್ದ ಸಂದರ್ಭ ಮಾತನಾಡುತ್ತಿರಲಿಲ್ಲ. 

ಬಳಿಕ ಮನೆಯಲ್ಲಿಯೇ ಚಿಕಿತ್ಸೆ ಪಡೆದುಕೊಂಡು ವಿಶ್ರಾಂತಿಯಲ್ಲಿದ್ದವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನಲೆಯಲ್ಲಿ ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿರುವುದನ್ನು ಅವರನ್ನು ಪರೀಕ್ಷಿಸಿದ ವೈದ್ಯರು ಧೃಡಪಡಿಸಿದ್ದಾರೆ.

ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article