ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಹೆಚ್ಚುವರಿ ಕೆಲಸದ ಹೊರೆ ವಿರೋಧಿಸಿ ಪ್ರತಿಭಟನೆ
ಅದೇ ರೀತಿ ವಿಬಿಜಿ, ರಾಮ್‌ಜಿ ಮಾನವ ದಿನಗಳ ಗುರಿ, ಮನೆ ತೆರಿಗೆ ಸಂಗ್ರಹ, ನೀರಿನ ತೆರಿಗೆ ಮೀಟರ್ ರೀಡಿಂಗ್, ಸಾಮಾಜಿಕ ಲೆಕ್ಕಪರಿಶೋಧನೆ, ಸ್ಥಳೀಯ ಲೆಕ್ಕಪರಿಶೋಧನೆ, ಅದಾಲತ್ ಸಭೆಗಳು, 11-ಬಿ ಖಾತೆ ಅಭಿಯಾನ, ಗ್ರಾಮಸಭೆ, ವಿಶೇಷ ಗ್ರಾಮಸಭೆ ಹಾಗೂ ಪ್ರತಿ ತಿಂಗಳ ಸ್ವಚ್ಛತಾ ಕಾರ್ಯಕ್ರಮ ಸೇರಿದಂತೆ ಹಲವು ಜವಾಬ್ದಾರಿಗಳನ್ನು ಕೂಡ ಗ್ರಾ.ಪಂ. ಸಿಬ್ಬಂದಿಗಳು ನಿರ್ವಹಿಸುತ್ತಿದ್ದು, ಕಂದಾಯ ಇಲಾಖೆಗೆ ಸಂಬಂಧಿಸಿದ ಜಾತಿ, ಆದಾಯ ಹಾಗೂ ಶಾಶ್ವತ ನಿವಾಸ ಪ್ರಮಾಣಪತ್ರ ವಿತರಣೆಯ ಹೊಣೆಯನ್ನು ತಮಗೆ ಹೆಚ್ಚುವರಿಯಾಗಿ ಹೊರಿಸಿದ್ದು ಸರಿಯಲ್ಲ, ಈ ಕರ್ತವ್ಯಕ್ಕೆ ಯಾವುದೇ ಗೌರವಧನ ಅಥವಾ ಭತ್ಯೆ ನೀಡುವ ಕುರಿತು ಆದೇಶದಲ್ಲಿ ಉಲ್ಲೇಖವಿಲ್ಲ. ಹಾಹಾಗಿ ಈ ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಲಾಗಿದೆ.
ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಅನ್ಯ ಇಲಾಖೆಗಳ ಯಾವುದೇ ಕೆಲಸವನ್ನು ವಹಿಸದಂತೆ ಕ್ರಮಕೈಗೊಳ್ಳಬೇಕು ಎಂದು ಪ್ರತಿಭಟನಾ ನಿರತ ಗ್ರಾ.ಪಂ. ಸಿಬ್ಬಂದಿಗಳು ಒತ್ತಾಯಿಸಿದರು.
ಬಳಿಕ ತಾ.ಪಂ.ನ ಆಡಳಿತ ವಿಭಾಗದ ಅಸಿಸ್ಟೆಂಟ್ ಡೈರೆಕ್ಟರ್ ವಿಜಯ ಶಂಕರ್ ಅಳ್ವ ಅವರ ಮೂಲಕ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು, ಪ್ರಮುಖರು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
