ಹಾವು ಕಚ್ಚಿ ಬಾಲಕಿ ಅಸ್ವಸ್ಥ
Wednesday, July 15, 2026
ಬೆಳ್ತಂಗಡಿ: ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಗೆ ಹಾವು ಕಚ್ಚಿದ ಆತಂಕಕಾರಿ ಘಟನೆ ಮಂಗಳವಾರ ನಡೆದಿದೆ.
ಹಾವು ಕಚ್ಚಿದ್ದರಿಂದ ಅಸ್ವಸ್ಥಗೊಂಡಿರುವ ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಮಲ್ಲಿಗೆಮಜಲು ಮಸೀದಿಯ ಅಧ್ಯಕ್ಷ ಶಿಹಾಬ್ ಎಂಬವರ ಪುತ್ರಿ ಫಾತಿಮತ್ ಸಅದಿಯಾ(4) ಹಾವು ಕಚ್ಚಿದ್ದರಿಂದ ಅಸ್ವಸ್ಥಗೊಂಡ ಬಾಲಕಿ.
ಮಾಹಿತಿಯ ಪ್ರಕಾರ ಫಾತಿಮತ್ ಸಅದಿಯಾ ಎಂದಿನಂತೆ ಮಂಗಳವಾರವೂ ಅಂಗನವಾಡಿಗೆ ತೆರಳಿ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದಳು. ಈ ವೇಳೆ ತರಗತಿ ಕೊಠಡಿಯೊಳಗೆ ಆಟಿಕೆಗಳ ನಡುವೆ ಅಡಗಿದ್ದ ಹಾವು ಬಾಲಕಿಗೆ ಕಚ್ಚಿದೆ. ಇದನ್ನು ಗಮನಿಸಿದ ಅಂಗನವಾಡಿ ಸಹಾಯಕಿ ಕೂಡಲೇ ಬಾಲಕಿಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ.