ಸಂಜೀವಿನಿ ಒಕ್ಕೂಟಕ್ಕೆ 23 ಲಕ್ಷ ರೂ. ವಂಚಿಸಿದ ದಂಪತಿಯ ಬಂಧನ
ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರ್ತಿಯಾಗಿ ಸುಗಂಧಿ ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ 2023ರಿಂದ 2025ರ ವರೆಗೆ ಸದಸ್ಯರಿಂದ ಸಂಗ್ರಹಿಸಿದ ಸಾಲ ಮರುಪಾವತಿ ಹಣವನ್ನು ರಿಜಿಸ್ಟರ್‌ನಲ್ಲಿ ದಾಖಲಿಸಿ, ಅದನ್ನು ಒಕ್ಕೂಟದ ಬ್ಯಾಂಕ್ ಖಾತೆಗೆ ಜಮೆ ಮಾಡದೆ ದುರ್ಬಳಕೆ ಮಾಡಿಕೊಂಡಿರುವುದು ತನಿಖೆಯಿಂದ ತಿಳಿದುಬಂದಿದೆ. ಜೊತೆಗೆ ವಿವಿಧ ಸಂಘಗಳ ಹೆಸರಿನಲ್ಲಿ ಒಕ್ಕೂಟದ ಚೆಕ್‌ಗಳಿಗೆ ಅಧ್ಯಕ್ಷ ಹಾಗೂ ಕಾರ್ಯದರ್ಶಿಯ ನಕಲಿ ಸಹಿ ಬಳಸಿ ಬ್ಯಾಂಕಿನಿಂದ ಹಣ ಹಿಂಪಡೆದಿರುವುದು, ಲೆಕ್ಕಪರಿಶೋಧನೆ ವೇಳೆ ಅಕ್ರಮ ಬಯಲಾಗದಂತೆ ಪ್ರತ್ಯೇಕ ಸಾಲದ ಖಾತೆ ಪುಸ್ತಕಗಳನ್ನು ನಿರ್ವಹಿಸಿರುವುದು ಹಾಗೂ ಕಾರ್ಯಕಾರಿ ಸಮಿತಿಗೆ ಅನುಮಾನ ಬಾರದಂತೆ ವಿವಿಧ ದಾಖಲೆಗಳನ್ನು ಸೃಷ್ಟಿಸಿ ಸುಮಾರು 23 ಲಕ್ಷ ಹಣ ದುರುಪಯೋಗಪಡಿಸಿಕೊಂಡಿರುವುದು ತನಿಖೆಯಿಂದ ಬಹಿರಂಗವಾಗಿದೆ.
ಪ್ರಕರಣ ಕುರಿತಂತೆ ಇತ್ತೀಚೆಗೆ ಪ್ರಕರಣ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ನಿರ್ದೇಶನ ಹಾಗೂ ಹಿರಿಯಡಕ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ ಗೋಪಿಕೃಷ್ಣ ಮಾರ್ಗದರ್ಶನದಲ್ಲಿ, ಪಿಎಸ್‌ಐ (ಕಾನೂನು ಮತ್ತು ಸುವ್ಯವಸ್ಥೆ) ಪುನೀತ್ ಕುಮಾರ್ ಬಿ.ಇ. ಹಾಗೂ ಪಿಎಸ್‌ಐ (ತನಿಖೆ) ವಿಠ್ಠಲ ಮಲವಡಕರ ನೇತೃತ್ವದ ತಂಡ ಸುಗಂಧಿ ಮತ್ತು ಸಂತೋಷ್‌ನನ್ನು ವಶಕ್ಕೆ ಪಡೆದು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.