ಕೊಲ್ಲೂರಿಗೆ ಕೇರಳ ಸಿಎಂ ಸತೀಶನ್ ಭೇಟಿ
Saturday, July 11, 2026
ಕೊಲ್ಲೂರು: ಕೇರಳ ರಾಜ್ಯದ ನೂತನ ಮುಖ್ಯಮಂತ್ರಿ ವಿ.ಡಿ. ಸತೀಶನ್ ಶನಿವಾರ ಕೊಲ್ಲೂರಿಗೆ ಭೇಟಿ ನೀಡಿ ಶ್ರೀ ಮೂಕಾಂಬಿಕೆಯ ದರ್ಶನ ಪಡೆದರು.
ಶ್ರೀ ಮೂಕಾಂಬಿಕಾ ದೇವಿಯ ಅಪಾರ ಭಕ್ತರಾಗಿರುವ ಸತೀಶನ್ ಅವರು ದೇವಿಯ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಝಡ್ ಪ್ಲಸ್ ಭದ್ರತೆಯಲ್ಲಿ ದೇವಸ್ಥಾನಕ್ಕೆ ಬಂದಿದ್ದ ಕೇರಳ ಸಿಎಂಗೆ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಗೌರವ ಸಲ್ಲಿಸಲಾಯಿತು. ದೇವಾಲಯದಲ್ಲೂ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.
ಕೇರಳದ ಮುಖ್ಯಮಂತ್ರಿಯಾದ ಬಳಿಕ ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರಕ್ಕೆ ಇದು ಅವರ ಮೊದಲ ಭೇಟಿಯಾಗಿದೆ. ದೇವಾಲಯದ ಭೇಟಿ ಬಳಿಕ ಮಂಗಳೂರು ಮಾರ್ಗವಾಗಿ ಬೆಂಗಳೂರಿಗೆ ತೆರಳಿದರು.
ಇತ್ತೀಚೆಗೆಷ್ಟೇ ತಮಿಳುನಾಡು ನೂತನ ಸಿಎಂ ಜೋಸೆಫ್ ವಿಜಯ್ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿದ್ದನ್ನಿಲ್ಲಿ ಸ್ಮರಿಸಬಹುದು.