ಟ್ರಾಫಿಕ್ ದಂಡ ರಿಯಾಯಿತಿ: ಜು.10 ಕೊನೆಯ ದಿನ

ಟ್ರಾಫಿಕ್ ದಂಡ ರಿಯಾಯಿತಿ: ಜು.10 ಕೊನೆಯ ದಿನ

ಮಂಗಳೂರು: ಸಾರಿಗೆ ಇಲಾಖೆಯಲ್ಲಿ 1991 ರಿಂದ 2022ರ ಅವಧಿಯಲ್ಲಿ ದಾಖಲಾದ ಹಾಗೂ ಪೊಲೀಸ್ ಇಲಾಖೆಯ ಟ್ರಾಫಿಕ್ ಚಲನ್ನಲ್ಲಿ ಮೇ 2026 ಕ್ಕಿಂತ ಮೊದಲು ದಾಖಲಾದ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಲಾಗಿದೆ. 

ಈ ರಿಯಾಯಿತಿಯು ಮುಂಬರುವ ರಾಷ್ಟ್ರೀಯ ಲೋಕ ಅದಾಲತ್ ಜುಲೈ 11 ರ ಸಂಬಂಧ ಆದೇಶಿಸಲಾಗಿದ್ದು,  ಜೂನ್ 21 ರಿಂದ  ಜುಲೈ 10 ರವರೆಗೆ ಮಾತ್ರ ಅನ್ವಯವಾಗುತ್ತದೆ. ಆದುದರಿಂದ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ಮೇಲೆ ಕಾಣಿಸಿದ ಅವಧಿಯಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ಶೇ.50 ರಿಯಾಯಿತಿಯಲ್ಲಿ ದಂಡ ಪಾವತಿಸುವ ಮೂಲಕ ತಮ್ಮ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನಿಸಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article