ಜು.17 ರಂದು ‘ಆರೋಗ್ಯಕ್ಕಾಗಿ ಮುದ್ರೆಗಳು’ ಪುಸ್ತಕ ಬಿಡುಗಡೆ
ಕಾರ್ಯಕ್ರಮದಲ್ಲಿ ‘ಆರೋಗ್ಯಕ್ಕಾಗಿ ಮುದ್ರೆಗಳು’ ಪುಸ್ತಕವನ್ನು ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ ಅವರು ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರಿನ ಎಸ್.ಸಿ.ಎಸ್. ಆಸ್ಪತ್ರೆಯ ಅಧ್ಯಕ್ಷರು ಹಾಗೂ ಆಡಳಿತ ನಿರ್ದೇಶಕ ಡಾ. ಜೀವರಾಜ್ ಸೊರಕೆ ಅವರು ವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಯೋಗಗುರು ಹಾಗೂ ಪುಸ್ತಕದ ಲೇಖಕ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರು ಯೋಗ, ಮುದ್ರೆಗಳು ಹಾಗೂ ಆರೋಗ್ಯಕರ ಜೀವನಶೈಲಿಯ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಗೌರವಾನ್ವಿತ ಅತಿಥಿಗಳಾಗಿ ಬೆಂಗಳೂರಿನ ಆರ್.ಎನ್.ಎಸ್. ತಾಂತ್ರಿಕ ವಿದ್ಯಾಲಯದ ಪ್ರೊಫೆಸರ್ ಡಾ. ಸುರೇಶ್ ದೇಲಂಪಾಡಿ ಹಾಗೂ ಮಂಗಳೂರಿನ ಮಧುಬನ್ ಗ್ರಾಫಿಕ್ಸ್‌ನ ಮಾಲಕ ಪ್ರಸನ್ನ ಕೆ. ಉಪಸ್ಥಿತರಿರುವರು.
ಇಂದಿನ ಒತ್ತಡದ ಬದುಕಿನಲ್ಲಿ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗ ಮತ್ತು ಮುದ್ರೆಗಳ ಮಹತ್ವವನ್ನು ಜನರಿಗೆ ಪರಿಚಯಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಆಸಕ್ತ ಸಾರ್ವಜನಿಕರು, ಯೋಗಾಭ್ಯಾಸಿಗಳು, ವೈದ್ಯರು, ವಿದ್ಯಾರ್ಥಿಗಳು ಹಾಗೂ ಆರೋಗ್ಯದ ಬಗ್ಗೆ ಕಾಳಜಿ ಹೊಂದಿರುವ ಎಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆಯುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.