ರಾಷ್ಟ್ರೀಯ ಲೋಕ್ ಅದಾಲತ್: 3,04,904 ಪ್ರಕರಣ ಇತ್ಯರ್ಥ

ರಾಷ್ಟ್ರೀಯ ಲೋಕ್ ಅದಾಲತ್: 3,04,904 ಪ್ರಕರಣ ಇತ್ಯರ್ಥ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್ತಿನಲ್ಲಿ 2,665 ನ್ಯಾಯಾಲಯದ ಬಾಕಿ ಪ್ರಕರಣಗಳು ಹಾಗೂ 3,02,239 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ-ಸಂಧಾನದ ಮೂಲಕ ಬಗೆಹರಿಸಲಾಗಿದೆ.

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದನ್ವಯ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಈ ವರ್ಷದ 2ನೇ ರಾಷ್ಟ್ರೀಯ ಲೋಕ್ ಅದಾಲತ್ತನ್ನು  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಗೂ ತಾಲ್ಲೂಕುಗಳಲ್ಲೂ ಹಮ್ಮಿಕೊಂಡಿದ್ದು, ರಾಷ್ಟ್ರೀಯ ಲೋಕ್ ಅದಾಲತ್ತಿನಲ್ಲಿ ಆಸ್ತಿ ವಿವಾದಗಳು, ಹಣವಸೂಲಾತಿ ವಿವಾದಗಳು, ನಿರ್ದಿಷ್ಟ ಪರಿಹಾರ ಕಾಯ್ದೆಯಡಿ ದಾಖಲಿಸಿರುವ ದಾವೆಗಳು, (MVC) ಮೋಟಾರು ವಾಹನಗಳ ಪ್ರಕರಣಗಳು, ಒಒಖಆ ಪ್ರಕರಣಗಳು, ಜೀವನಾಂಶ ಪ್ರಕರಣಗಳು, ದಾಂಪತ್ಯ ಪುನರ್ ಸ್ಥಾಪನೆ ಪ್ರಕರಣಗಳು, ಕೌಟುಂಬಿಕ ಪ್ರಕರಣಗಳು ರಾಜಿ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು ಮತ್ತು ಚೆಕ್ ಬೌನ್ಸ್ ಪ್ರಕರಣಗಳ ಜೊತೆ ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜಿ-ಸಂಧಾನಕ್ಕಾಗಿ ಗುರುತಿಸಿ  ಜಿಲ್ಲೆಯಾದ್ಯಂತ 32 ನ್ಯಾಯಾಲಯದ ಪೀಠವನ್ನು ರಚನೆ ಮಾಡಿ, ಸದರಿ ಪೀಠಗಳಲ್ಲಿ ಬಾಕಿಯಿದ್ದ 57510 ನ್ಯಾಯಾಲಯದ ಪ್ರಕರಣಗಳಲ್ಲಿ 8973 ಪ್ರಕರಣಗಳನ್ನು ರಾಜಿ-ಸಂಧಾನಕ್ಕಾಗಿ ಗುರುತಿಸಿ ಅದರಲ್ಲಿ 2,665 ಪ್ರಕರಣಗಳನ್ನು ರಾಜಿ-ಸಂಧಾನದ ಮೂಲಕ ಬಗೆಹರಿಸಲಾಗಿದೆ.

ಒಟ್ಟಾರೆ ರಾಷ್ಟ್ರೀಯ ಲೋಕ್ ಅದಾಲತ್ತಿನಲ್ಲಿ 3,04,904 ಪ್ರಕರಣಗಳನ್ನು ಗೌರವಾನ್ವಿತ ನ್ಯಾಯಾಧೀಶರುಗಳು, ಸಂಧಾನಕಾರರು, ವಕೀಲರು, ಪಕ್ಷಗಾರರು ಹಾಗೂ ನ್ಯಾಯಾಲಯದ ಸಿಬ್ಬಂದಿಗಳ ಸಹಕಾರದೊಂದಿಗೆ ಇತ್ಯರ್ಥ ಪಡಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article