ಮೂಳೆ ತಜ್ಞ ಉಮಾನಂದ ಮಲ್ಯ ನಿಧನ
Saturday, July 4, 2026
ಮಂಗಳೂರು: ಮೂಳೆ ತಜ್ಞ ಡಾ. ಉಮಾನಂದ ಮಲ್ಯ (74) ಅನಾರೋಗ್ಯದಿಂದ ಜು. 4ರಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಮಂಗಳೂರಿನ ಕಸ್ತೂರ್ಬಾ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ನೊಂದಿಗೆ ಡಿ ಆರ್ಥೋ, ಮಾಸ್ಟರ್ ಆಫ್ ಸರ್ಜರಿ ಪದವಿಯನ್ನೂ ಅವರು ಪಡೆದಿದ್ದರು. ಅತ್ತಾವರದ ಕೆಎಂಸಿ ಆಸ್ಪತ್ರೆಯಲ್ಲಿಯೇ ಮೂಳೆ ಚಿಕಿತ್ಸಾ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದ್ದರು.
ಮಂಗಳೂರಿನ ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಅವರು, ದೇವಳದ ಹಿರಿಯ ಸ್ವಯಂಸೇವಕರಲ್ಲಿ ಒಬ್ಬರಾಗಿದ್ದರು. ಆಚಾರ್ಯ ಮಠದ ಶಾರದಾ ಮಹೋತ್ಸವ ಸಮಿತಿಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ವೈದ್ಯಕೀಯ ವೃತ್ತಿಯಲ್ಲಿ ಸಮಾಜದ ದುರ್ಬಲ ವರ್ಗದವರಿಗೆ ಉಚಿತವಾಗಿ ಚಿಕಿತ್ಸೆ ನೀಡುವ ಮೂಲಕವೂ ಹೆಸರು ಪಡೆದಿದ್ದರು.