ಸಮಾನತೆಯ ಸಂದೇಶ ಸಾರಿದ ಸಂತ ರವಿದಾಸರು: ಪ್ರೊ. ಸುಕನ್ಯಾ ಮಾರ್ಟಿಸ್
ಕರ್ನಾಟಕ ರಾಜ್ಯ ಮಹಾ ವಿದ್ಯಾಲಯ ಶಿಕ್ಷಕ ಸಂಘದ ಮಂಗಳೂರು ವಿಭಾಗ ಮತ್ತು ಸೈಂಟ್ ಆಗ್ನೆಸ್ ಕಾಲೇಜು (ಸ್ವಾಯತ್ತ) ಇದರ ಹಿಂದಿ ವಿಭಾಗದ ವತಿಯಿಂದ ಸಂತ ರವಿದಾಸರ 650ನೇ ಜನ್ಮ ವರ್ಷಾಚರಣೆ ಅಂಗವಾಗಿ ಬುಧವಾರ ನಗರದ ಸೈಂಟ್ ಆಗ್ನೆಸ್ ಕಾಲೇಜಿನ ಸಭಾಂಗಣದಲ್ಲಿ ನಡೆದ ಭಾರತೀಯ ಸಂತ ಪರಂಪರೆ ಉಪನ್ಯಾಸ ಮಾಲಿಕೆ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಸಂತ ರವಿದಾಸರ ಆಧ್ಯಾತ್ಮಿಕ ಚಿಂತನೆ, ಜೀವನ, ಬೋಧನೆಗಳ ಬಗ್ಗೆ ಯುವ ಸಮುದಾಯದಲ್ಲಿ ಅರಿವು ಮೂಡಿಸಬೇಕು. ಇದರಿಂದ ಆದರ್ಶ ಹಾಗೂ ಸಮಾನತೆಯ ಸಮಾಜ ನಿರ್ಮಾಣಕ್ಕೆ ಪ್ರೇರಣೆ ಸಿಗಲಿದೆ ಎಂದು ಅವರು ಹೇಳಿದರು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಕಾರ್ಯಕ್ರಮ ಉದ್ಘಾಟಿಸಿದರು. ಸೈಂಟ್ ಆಗ್ನೆಸ್ ಕಾಲೇಜಿನ ಪ್ರಾಂಶುಪಾಲೆ ಡಾ.ಎಂ.ವೆನಿಸ್ಸಾ ಅಧ್ಯಕ್ಷತೆ ವಹಿಸಿದ್ದರು.
ಮಹಾ ವಿದ್ಯಾಲಯ ಶಿಕ್ಷಕ ಸಂಘದ ರಾಜ್ಯ ಜಂಟಿ ಕಾರ್ಯದರ್ಶಿ ಡಾ. ಮಾಧವ ಎಂ.ಕೆ., ಸದಸ್ಯೆ ಡಾ. ನಾಗರತ್ನ ರಾವ್ ಉಪಸ್ಥಿತರಿದ್ದರು.
ಕಾರ್ಯಕ್ರಮ ಸಂಯೋಜಕರಾದ ಡಾ.ಉದಯ ಕುಮಾರ್.ಬಿ. ಸ್ವಾಗತಿಸಿ, ಡಾ. ಆರ್. ನಾಗೇಶ್ ವಂದಿಸಿದರು. ವಿದ್ಯಾರ್ಥಿನಿ ಸಾಂಡ್ರಾ ಪೀಟರ್ ಕಾರ್ಯಕ್ರಮ ನಿರೂಪಿಸಿದರು.