ಬಸ್ಸಿನಲ್ಲಿ ವಿದ್ಯಾರ್ಥಿನಿಯೊಂದಿಗೆ ಅಸಭ್ಯ ವರ್ತನೆ: ಕಂಡಕ್ಟರ್ ಸೆರೆ

ಬಸ್ಸಿನಲ್ಲಿ ವಿದ್ಯಾರ್ಥಿನಿಯೊಂದಿಗೆ ಅಸಭ್ಯ ವರ್ತನೆ: ಕಂಡಕ್ಟರ್ ಸೆರೆ

ಮಂಗಳೂರು: ಚಲಿಸುವ ಬಸ್ಸಿನಲ್ಲಿಯೇ  ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಅಸಭ್ಯ ಸನ್ನೆ ಹಾಗೂ ಗುಪ್ತಾಂಗ ಪ್ರದರ್ಶನ ಮಾಡಿ ವಿಕೃತಿ ಮೆರೆದಿದ್ದ ಖಾಸಗಿ ಬಸ್ ಕಂಡಕ್ಟರ್‌ನನ್ನು ಮಂಗಳೂರು ದಕ್ಷಿಣ (ಪಾಂಡೇಶ್ವರ) ಠಾಣೆ ಪೊಲೀಸರು ಬಂಧಿಸಿದ್ದಾರೆ.

ಉಪ್ಪಿನಂಗಡಿಯ ಕಲ್ಲೇರಿ ಮನೆ ನಿವಾಸಿಯಾಗಿದ್ದು, ಪ್ರಸ್ತುತ ಉಪ್ಪಿನಂಗಡಿಯ ಕರ್ವೇಲು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಇರ್ಫಾನ್ (32) ಬಂಧಿತ ಆರೋಪಿ. ಈತ ಮಂಗಳೂರು ಮತ್ತು ವಿಟ್ಲ ನಡುವೆ ಸಂಚರಿಸುವ ಖಾಸಗಿ ಬಸ್ಸಿನಲ್ಲಿಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ. 

ಜು.9 ರಂದು ಸಂಜೆ ವೇಳೆಗೆ ಬಸ್ ಎಂದಿನಂತೆ ಸಂಚರಿಸುತ್ತಿದ್ದಾಗ ಈ ಆಘಾತಕಾರಿ ಘಟನೆ ಸಂಭವಿಸಿದೆ. ಬಸ್‌ನಲ್ಲಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡ ಕಂಡಕ್ಟರ್ ಇರ್ಫಾನ್, ವಿಕೃತವಾಗಿ ವರ್ತಿಸಲು ಆರಂಭಿಸಿದ್ದಾನೆ. ವಿದ್ಯಾರ್ಥಿನಿಯರ ಮುಂಭಾಗವೇ ತನ್ನ ಗುಪ್ತಾಂಗ ಪ್ರದರ್ಶನ ಮಾಡಿದ ಆರೋಪಿ, ಅತ್ಯಂತ ಅಸಭ್ಯವಾಗಿ ಸನ್ನೆಗಳನ್ನು ಮಾಡಿದ್ದಾನೆ. ಅಷ್ಟೇ ಅಲ್ಲದೆ, ವಿದ್ಯಾರ್ಥಿನಿಯರನ್ನು ಬಸ್ನ ಹಿಂದಿನ ಸೀಟಿಗೆ ಬರುವಂತೆ ಕರೆದು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರಲಾಗಿದೆ.

ಕಂಡಕ್ಟರ್‌ನ ಈ ವಿಕೃತ ವರ್ತನೆಯಿಂದ ಆಘಾತಕ್ಕೊಳಗಾದ ವಿದ್ಯಾರ್ಥಿನಿಯರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನ ಅನ್ವಯ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಆರೋಪಿ ಇರ್ಫಾನ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article