ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಭಾಗವಹಿಸಲು ಶಾಸಕ ಭರತ್ ಶೆಟ್ಟಿ ಕರೆ

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಭಾಗವಹಿಸಲು ಶಾಸಕ ಭರತ್ ಶೆಟ್ಟಿ ಕರೆ


ಮಂಗಳೂರು: ಚುನಾವಣಾ ಆಯೋಗವು ಹಮ್ಮಿಕೊಂಡಿರುವ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ಪ್ರಕ್ರಿಯೆಯಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಬಿಎಲ್‌ಒ ಅಧಿಕಾರಿಗಳು ಶಾಸಕರಿಗೆ ಅರ್ಜಿ ನಮೂನೆಯನ್ನು ಹಸ್ತಾಂತರಿಸಿದರು. 

ಪ್ರಜಾಪ್ರಭುತ್ವದ ಸುಭದ್ರತೆಗೆ ಮತದಾರರ ಪಟ್ಟಿಯ ಪರಿಷ್ಕರಣೆ ಅತ್ಯಂತ ಮಹತ್ವದ್ದಾಗಿದೆ. ದೇಶದಲ್ಲಿ ಬದುಕಲು, ಮತದಾನದ ಹಕ್ಕು ಉಳಿಸಿಕೊಳ್ಳಲು, ಮಕ್ಕಳ ಹಕ್ಕಿನ ಭದ್ರತೆಗಾಗಿ ಎಸ್‌ಐಆರ್ ಪ್ರಾಮುಖ್ಯತೆ ಪಡೆದಿದೆ ಎಂದು ಶಾಸಕರು ತಿಳಿಸಿದರು. 

ಅರ್ಹ ಪ್ರತಿಯೊಬ್ಬ ಮತದಾರರು ಅಸಡ್ಡೆ ತೋರದೆ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು, ವಿಳಾಸ ಹಾಗೂ ಇತರ ವಿವರಗಳನ್ನು ಪರಿಶೀಲಿಸಿ, ಅಗತ್ಯವಿರುವ ಸೇರ್ಪಡೆ, ತಿದ್ದುಪಡಿ ಅಥವಾ ಬದಲಾವಣೆಗಳನ್ನು ನಿಗದಿತ ಅವಧಿಯೊಳಗೆ ಮಾಡಿಸಿಕೊಳ್ಳುವ ಮೂಲಕ ಪರಿಷ್ಕರಣೆ ಕಾರ್ಯಕ್ಕೆ ಸಹಕರಿಸುವಂತೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು. 

ಬೂತ್ ಲೆವೆಲ್ ಅಧಿಕಾರಿ (ಬಿಎಲ್‌ಒ) ಧರ್ಮ ಸಾಮ್ರಾಜ್ಯ (ವಿ.ಎ.) ಹಾಗೂ ಬಿಎಲ್‌ಒ ಭವ್ಯ (ಶಿಕ್ಷಕಿ), ನಿಕಟಪೂರ್ವ ಮಹಾನಗರ ಪಾಲಿಕೆ ಸದಸ್ಯ ಜಯಾನಂದ ಅಂಚನ್, ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್ ಬೋಂದೆಲ್ ಮತ್ತು ರಣದೀಪ್ ಕಾಂಚನ್, ಮಂಡಲ ಕಾರ್ಯಾಲಯದ ಕಾರ್ಯದರ್ಶಿ ಉಮೇಶ್ ಶೆಟ್ಟಿ, ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸಂಜೀತ್ ಶೆಟ್ಟಿ, ಮಹಿಳಾ ಮೋರ್ಚಾದ ಕಾರ್ಯದರ್ಶಿ ಸರೋಜಿನಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಪ್ರಜ್ವಲ್ ಶೆಟ್ಟಿ, ವಾರ್ಡ್ ಅಧ್ಯಕ್ಷ ಹರಿಪ್ರಸಾದ್, ವಾರ್ಡ್ ಪ್ರಧಾನ ಕಾರ್ಯದರ್ಶಿ ದಿವ್ಯ ಸುನಿಲ್, ಬೂತ್ ಅಧ್ಯಕ್ಷ ಶಿವಪ್ರಸಾದ್, ಬೂತ್ ಕಾರ್ಯದರ್ಶಿ ಪ್ರಣೀತ ಹಾಗೂ ಒಬಿಸಿ ಮೋರ್ಚಾದ ಉಪಾಧ್ಯಕ್ಷ ರಮೇಶ್ ಆಚಾರ್ಯ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article