ಯುವ ಕಾಂಗ್ರೆಸ್‌ನ ಜಿಲ್ಲಾ ಕಾರ್ಯದರ್ಶಿಯಾಗಿ ಆಯಿಷಾ ಪಿ. ನೇಮಕ
Thursday, July 23, 2026
ಮಂಗಳೂರು: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು ಬಲಗೊಳಿಸುವ ಹಿನ್ನಲೆಯಲ್ಲಿ ಹಾಗೂ ಸಂಘಟನೆಯನ್ನು ರಾಜ್ಯಾದ್ಯಂತ ಸಕ್ರಿಯಗೊಳಿಸಲು ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನುಚಿಬ್ ಇವರ ನಿರ್ದೇಶನದ ಮೇರೆಗೆ ಹಾಗೂ ಅಖಿಲ ಭಾರತ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ನಿಗಮ್ ಭಂಡಾರಿ ಅವರ ಅನುಮೋದನೆಯೊಂದಿಗೆ ಆಯಿಷಾ ಪಿ. ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದು ಕರ್ನಾಟಕ ಪ್ರದೇಶ ಯೂತ್ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷ ಮಂಜುನಾಥ್ ಹೆಚ್.ಎಸ್. ಆದೇಶವನ್ನು ಹೊರಡಿಸಿದ್ದಾರೆ.
ಹೆಲ್ತ್ ಇನ್ಸ್‌ಪೆಕ್ಟರ್ ಮತ್ತು ಲೇಖಕಿ ಆಗಿರುವ ಆಯಿಷಾ ಅವರು ಪತ್ರಕರ್ತ, ಟಿವಿ ನಿರೂಪಕ ಶಂಶೀರ್ ಬುಡೋಳಿ ಅವರ ಪತ್ನಿ.