ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ
Sunday, July 26, 2026
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆದ ಘಟನೆ ನಗರದ ಲಾಲ್‌ಬಾಗ್ ಸಿಗ್ನಲ್ ಬಳಿ ಶನಿವಾರ ಮಧ್ಯಾಹ್ನ 1.45ರ ಸುಮಾರಿಗೆ ನಡೆದಿದೆ.
ವಿಕ್ಕಿ ಬಪ್ಪಲ್ ತಲವಾರು ದಾಳಿಗೊಳಗಾದ ವ್ಯಕ್ತಿ. ರೌಡಿ ಶೀಟರ್ ಆಗಿರುವ ಈತ, ಮಾದಕವಸ್ತು ಮಾರಾಟದ ಕಾರಣಕ್ಕೆ ಪೊಲೀಸ್ ಕಣ್ಗಾವಲಿನಲ್ಲಿದ್ದ, ಈತನ ವಿರುದ್ಧ 11 ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಲಾಲ್ ಬಾಗ್ ಸಿಗ್ನಲ್ ಬಳಿ ಬೈಕಿನಲ್ಲಿ ಸಂಚರಿಸುತ್ತಿದ್ದ ವಿಕ್ಕಿ ಬಪ್ಪಲ್ ನನ್ನು ಬೇರೊಂದು ಬೈಕಿನಲ್ಲಿ ಹಿಂಬಾಳಿಸಿಕೊಂಡ ಬಂದ ದುಷ್ಕರ್ಮಿಯೊಬ್ಬ ತಲವಾರಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ದಾಳಿಯಿಂದ ವಿಕ್ಕಿ ಬಪ್ಪಲ್ ನ ಕುತ್ತಿಗೆಯ ಬಳಿ ಆಳವಾದ ಗಾಯವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.