ನಾಳೆ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
Friday, July 17, 2026
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಜುಲೈ 18 ರಂದು ಜಿಲ್ಲೆಯಾಧ್ಯಂತ ಆರೆಂಜ್ ಅಲರ್ಟ್ ಘೋಷಣೆಯಾದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ, ಖಾಸಗಿ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಹಾಗೂ ದ.ಕ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ದರ್ಶನ್ ಹೆಚ್.ವಿ. ರಜೆ ಘೋಷಿಸಿದ್ದಾರೆ.