ತಿಮರೋಡು ಗಡಿಪಾರು ಆದೇಶಕ್ಕೆ ತಡೆ ನೀಡಲು ಸುಪ್ರೀಂ ನಕಾರ
Monday, July 13, 2026
ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಸ್ಥಾಪಕ, ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಗಡಿಪಾರು ಆದೇಶ ಶಿಕ್ಷೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಅಪರಾಧ ಹಿನ್ನೆಲೆಯುಳ್ಳ ಕಾರಣಕ್ಕೆ ಮತ್ತು ನಿರಂತರವಾಗಿ ಸಮಾಜದ ಸ್ವಾಸ್ಥ ಕೆಡಿಸಿದ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಆದೇಶ ಹೊರಡಿಸಿದ್ದರು. ಇದನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯನ್ನು ಮಾನ್ಯ ಮಾಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಕರ್ನಾಟಕ ಹೈ ಕೋರ್ಟ್ ಕೂಡಾ ಈ ಹಿಂದೆ ಗಡಿಪಾರು ಆದೇಶಕ್ಕೆ ತಡೆ ನೀಡಲು ನಿರಾಕರಿಸಿತ್ತು.