ನಾಳೆ ದ.ಕ. ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
Wednesday, July 22, 2026
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಜುಲೈ 23 ರಂದು ಜಿಲ್ಲೆಯಾಧ್ಯಂತ ಯೆಲ್ಲೋ-ಆರೆಂಜ್ ಅಲರ್ಟ್ ಘೋಷಣೆಯಾದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ, ಖಾಸಗಿ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಹಾಗೂ ದ.ಕ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ದರ್ಶನ್ ಹೆಚ್.ವಿ. ರಜೆ ಘೋಷಿಸಿದ್ದಾರೆ.