ಉತ್ತಮ ಸಮಾಜವನ್ನು ರೂಪಿಸುವಲ್ಲಿ ಸರಕಾರ ಮತ್ತು ಶಿಕ್ಷಣ ಇಲಾಖೆ ಪಾತ್ರ ಮಹತ್ತರವದದ್ದು: ಎಂಎಲ್‌ಸಿ ಪುಟ್ಟಣ್ಣ

ಉತ್ತಮ ಸಮಾಜವನ್ನು ರೂಪಿಸುವಲ್ಲಿ ಸರಕಾರ ಮತ್ತು ಶಿಕ್ಷಣ ಇಲಾಖೆ ಪಾತ್ರ ಮಹತ್ತರವದದ್ದು: ಎಂಎಲ್‌ಸಿ ಪುಟ್ಟಣ್ಣ


ಮಂಗಳೂರು: ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ ಇದರ 2024-2026 ರ ಸಾಲಿನ ವಾರ್ಷಿಕ ಮಹಾಸಭೆಯು ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಬೆಂಗಳೂರು ಶಿಕ್ಷಕರ ಕ್ಷೇತ್ರ, ಮಾಜಿ ಉಪ ಸಭಾಪತಿಗಳು, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ರವರು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿ, ಶಿಕ್ಷಣ ವ್ಯವಸ್ಥೆಯಲ್ಲಿ ನೈಜವಾದ ಸಮಸ್ಯೆಗಳನ್ನು ಸರಕಾರವು ತಕ್ಷಣವೇ ಪರಿಹಾರವನ್ನು ನೀಡಬೇಕು. ಇಂದು ಖಾಸಗಿ ವ್ಯವಸ್ಥೆಯಲ್ಲಿ ಸಮಸ್ಯೆಗಳು ಬಂದಾಗ ಅಧಿಕಾರಿಗಳು ಅದನ್ನು ತಮ್ಮ ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಾರೆ. ಸಮಾಜವನ್ನು ರೂಪಿಸುವಲ್ಲಿ ಗುಣಮಟ್ಟದ ಮತ್ತು ಪರಿಣಾಮಕಾರಿ ಶಿಕ್ಷಣವನ್ನು ನೀಡುವಲ್ಲಿ ಸರಕಾರ ಮತ್ತು ಶಿಕ್ಷಣ ಇಲಾಖೆಗಳು ಬದ್ಧವಾಗಿರಬೇಕು. ಶಿಕ್ಷಣದಲ್ಲಿ ಹೊಸ ನೀತಿಗಳನ್ನು ರೂಪಿಸುವಲ್ಲಿ ಅಧಿಕಾರಿ ವರ್ಗವು ಪ್ರಾಯೋಗಿಕವಾಗಿ ಅದರ ಬಗ್ಗೆ ಅಧ್ಯಾಯನ ನಡೆಸಿ ನಂತರ ಅದನ್ನು ಕಾರ್ಯ ರೂಪಕ್ಕೆ ತರಬೇಕು. ಇಲ್ಲಿ  ಅಧಿಕಾರಿಗಳು ಸಾಮಾನ್ಯ ಜ್ಞಾನ ಹೊಂದಿರಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳು ವ್ಯಕ್ತಿ ಆಧಾರಿತವಾಗಿರದೆ ಸಂಸ್ಥೆ ಆಧಾರಿತವಾಗಿದ್ದಾಗ ಮಾತ್ರ ಅದಕ್ಕೆ ಹೆಚ್ಚು ಆಯುಸ್ಸು ಮತ್ತು ಜನಮಾನಸವಾಗುತ್ತದೆ ಎಂದು ಹೇಳಿದರು.

ರಾಜ್ಯ ಕುಪ್ಮಾ ಸಮಿತಿಯ ಕಾರ್ಯದರ್ಶಿ ಪ್ರೊ. ನರೇಂದ್ರ ಎಲ್. ನಾಯಕ್ ಅವರು ಕುಪ್ಮಾ 2024-26ರ ಸಾಲಿನ ವಾರ್ಷಿಕ ವರದಿಯನ್ನು ಮಂಡನೆ ಮಾಡಿದರು. ವರದಿಯನ್ನು ಮಂಡನೆ ಮಾಡಿ ಮಾತನಾಡಿ, ಕುಪ್ಮಾ ಸಂಘಟನೆಯು 2022 ರಲ್ಲಿ ಹುಟ್ಟಿಕೊಂಡ ಸಂಸ್ಥೆ. ಶಿಕ್ಷಣ ವ್ಯವಸ್ಥೆಯಲ್ಲಿ ಸಮಸ್ಯೆಗಳು ಉದ್ಭವಾದಾಗ ಸಮಸ್ಯೆಗಳಿಗೆ ಸರಕಾರ ಮತ್ತು ಶಿಕ್ಷಣ ಇಲಾಖೆಗಳು ಸಕಾರಾತ್ಮಕವಾಗಿ ಸ್ಪಂದಿಸಬೇಕು. ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಕುಪ್ಮಾವು ನಿರಂತರವಾಗಿ ಸರಕಾರದೊಂದಿಗೆ ಮಾತುಕತೆಗೆ ಬದ್ಧ. ಕುಪ್ಮಾ ಸಂಘಟನೆಯು ಎಂದಿಗೂ ಸರಾಕರದೊಂದಿಗೆ ಹೋರಾಟವನ್ನು ಬಯಸುವುದಿಲ್ಲ ಹೊರತು ಸಹಕಾರವನ್ನು ನಾವು ಬಯಸುತ್ತೇವೆ. ಶಿಕ್ಷಣ ಸಂಸ್ಥೆಗಳು ದಾರಿ ತಪ್ಪಿದಾಗ ತಿಳಿಹೇಳುವ ಮೂಲಕ ಸಮಸ್ಯೆಗಳನ್ನು ಪರಿಹಾರ ಮಾಡಬೇಕು. ಸರಕಾರದ ನೀತಿಗಳು ಶಿಕ್ಷಣ ವ್ಯವಸ್ಯೆಗೆ ಅದು ಪೂರಕವಾಗಿರಬೇಕು. ಖಾಸಗಿ ಪದವಿ ಪೂರ್ವ ಶಿಕ್ಷಣ ಸಂಸ್ಥೆಗಳ ಸಾಧನೆಯನ್ನು ಸರಕಾರ ಮತ್ತು ಶಿಕ್ಷಣ ಇಲಾಖೆಗಳು ಗುರುತಿಸುವ ಕೆಲಸವಾಗಬೇಕು ಎಂದು ಹೇಳಿದರು.

ಬೆಂಗಳೂರು ಉತ್ತರ ಜಿಲ್ಲಾ ಸಮಿತಿಯ ಗರವ ಅಧ್ಯಕ್ಷ ನಾಡೋಜ ವೂಡೇ ಪಿ. ಕೃಷ್ಣ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ನೀಡುವಲ್ಲಿ ಸರಕಾರ ಮತ್ತು ಖಾಸಗಿ ಕ್ಷೇತ್ರದ ಪಾತ್ರ ಮಹತ್ತರವಾಗಿರುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿರುವ ರಾಜ್ಯ ಕುಪ್ಮಾ ಸಮಿತಿಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು ಮಾತನಾಡಿ, ಕುಪ್ಮ ಕಾರ್ಯಕಾರಿಣಿ ಸಮಿತಿಯನ್ನು ರಾಜ್ಯಾದ್ಯಂತ ಬಲಪಡಿಸುವ ಬಗ್ಗೆ ಮತ್ತು ಕುಪ್ಮಾಕ್ಕೆ ಸದಸ್ಯರನ್ನು ಸೇರ್ಪಡೆಗೊಳಿಸುವ ಬಗ್ಗೆ ನೂತನ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ಕೇಂದ್ರ ಸಮಿತಿಯು ನಿರಂತರವಾಗಿ ಕಾರ್ಯನಿರ್ವಹಿಸುತ್ತದೆ ಹೇಳಿದರು. ಅಂತೆಯೇ ಶಿಕ್ಷಣ ಸಂಸ್ಥೆಯ ಸಮಸ್ಯೆಗಳನ್ನು ಸರ್ಕಾರದೊಂದಿಗೆ ಆರೋಗ್ಯಪೂರ್ಣವಾಗಿ ಬಗೆಹರಿಸಿಕೊಳ್ಳುವ ಮೂಲಕ ಸಮನ್ವಯತೆಯನ್ನು ಕಾಪಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಕುಪ್ಮಾ ಸಮಿತಿಯ ಎಲ್ಲಾ ಸದಸ್ಯರು ಕಾರ್ಯನಿರ್ವಹಿಸಬೇಕೆಂದು ಕರೆಯನ್ನು ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪುಟ್ಟಣ ಅವರ ಜನತಂತ್ರ ಕಾರ್ಯಸಾಧನೆಯನ್ನು ಗುರುತಿಸಿ ಕುಪ್ಮಾವು ಅವರನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.

ಕುಪ್ಮಾ ಬೆಂಗಳೂರು ದಕ್ಷಿಣ ಜಿಲ್ಲೆಯ ಡಾ. ಜಯರಾಮ್ ಶೆಟ್ಟಿ ಸ್ವಾಗತಿಸಿದರು. ಡಾ. ದೇವರಾಜ್ ಬಿಕೆ ಅವರು ಬೆಂಗಳೂರು ಕಾರ್ಯದರ್ಶಿ ವಂದಿಸಿದರು. ಕುಪ್ಮಾ ಬೆಂಗಳೂರು ಉಪಾಧ್ಯಕ್ಷ ದಿಲೀಪ್ ಕಾರ್ಯಕ್ರಮವನ್ನು ನಿರೂಪಿಸಿದರು.

ನಡೆದ ಕುಪ್ಮಾ ವಾರ್ಷಿಕ ಮಹಾಸಭೆಯಲ್ಲಿ ಕರ್ನಾಟಕ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಕುಪ್ಮಾದ ಸದಸ್ಯರು ಆಗಮಿಸಿ ತಮ್ಮ ತಮ್ಮ ಸಲಹೆ ಸೂಚನೆಗಳನ್ನು ಕೊಟ್ಟರು.

ವೇದಿಕೆಯ ಮೇಲೆ ಕುಪ್ಮಾದ ಗೌರವ ಅಧ್ಯಕ್ಷ ಕೆ.ಸಿ. ನಾಯಕ್, ಡಾ. ಎಂ.ಬಿ. ಪುರಾಣಿಕ್, ಬೆಂಗಳೂರು ಉತ್ತರ ಜಿಲ್ಲೆಯ ಅಧ್ಯಕ್ಷ ಕೀರ್ತನ್ ಕುಮಾರ್, ಕುಪ್ಮಾ ಬೆಂಗಳೂರು ದಕ್ಷಿಣ ಜಿಲ್ಲೆಯ ಡಾ. ಜಯರಾಮ್ ಶೆಟ್ಟಿ, ಬೆಂಗಳೂರು ಉತ್ತರ ಜಿಲ್ಲಾ ಸಮಿತಿ ಕಾರ್ಯದರ್ಶಿ ಡಾ. ದೇವರಾಜ್ ಬಿ.ಕೆ. ಮತ್ತು ರಾಜ್ಯ ಕುಪ್ಮಾ ಸಮಿತಿಯ ಸದಸ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article