ಭಾರೀ ಗಾಳಿ-ಮಳೆಗೆ ಮನೆಯ ಮೇಲೆ ಬಿದ್ದ ಮರ ಮತ್ತು ವಿದ್ಯುತ್ ಕಂಬ

ಭಾರೀ ಗಾಳಿ-ಮಳೆಗೆ ಮನೆಯ ಮೇಲೆ ಬಿದ್ದ ಮರ ಮತ್ತು ವಿದ್ಯುತ್ ಕಂಬ


ಮಂಗಳೂರು: ಭಾನುವಾರ ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಮರವೊಂದು ಮನೆಯ ಮೇಲೆ ಬಿದ್ದಿದ್ದು, ಮರದ ಜೊತೆಯಲ್ಲಿಯೇ ವಿದ್ಯುತ್ ಕಂಬವು ಬಿದ್ದಿದ್ದು, ಮನೆಯವರು ಪ್ರಾಣಪಾಯದಿಂದ ಪಾರಗಿರುವ ಘಟನೆ ವರದಿಯಾಗಿದೆ.

ಬಜಾಲ್ ಜೆಲ್ಲಿಗುಡ್ಡದ ನಿವಾಸಿ ಜ್ಯೋತಿಷ್ ಕುಮಾರ್ ಅವರ ‘ಸೌಹಾರ್ದ ನಿಲಯ’ ಎಂಬ ಮನೆಯ ಮೇಲೆ ಭಾನುವಾರ ರಾತ್ರಿ ಸುಮಾರು 10 ಗಂಟೆಯ ಸುಮಾರಿಗೆ ಈ ಅನಾಹುತ ಸಂಭವಿಸಿದ್ದು, ಮರ ಮನೆಯ ಮೇಲೆ ಬಿದ್ದ ಪರಿಣಾಮ ಮನೆಯ ಒಂದು ಭಾಗ ಜಖಂಗೊಂಡಿದೆ.

ಅಪಘಾತ ಸಂಭವಿಸಿದ ಸಮಯದಲ್ಲಿ ಜ್ಯೋತಿಷ್ ಕುಮಾರ್ ಅವರು ತಮ್ಮ ಕುಟುಂಬದೊಂದಿಗೆ ಮನೆಯಲ್ಲೇ ಇದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಘಟನೆಯಿಂದಾಗಿ ರಾತ್ರಿಯಿಂದಲೇ ಕಡಿತಗೊಂಡಿದ್ದ ವಿದ್ಯುತ್ ಸಂಪರ್ಕವನ್ನು ಸೋಮವಾರ ಮಧ್ಯಾಹ್ನ 3 ಗಂಟೆಯವರೆಗೆ ನಿವಾಸಿಗಳು ಪರದಾಡುವಂತಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article