ಶಾಲಾ ಕಾಲೇಜಿಗೆ ರಜೆ: ತರಗತಿ ನಡೆಸಿದರೆ ಕಾನೂನು ಕ್ರಮ: ಡಿಸಿ ಎಚ್ಚರಿಕೆ
Wednesday, July 1, 2026
ಮಂಗಳೂರು: ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮುನ್ನೆಚ್ಚರಿಕೆ ಪ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದು, ಇದನ್ನು ಉಲ್ಲಂಘಿಸಿ ತರಗತಿಗಳನ್ನು ನಡೆಸಿದ ಸಂಸ್ಥೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ರೆಡ್ ಅಲರ್ಟ್ ಘೋಷಣೆ ಜಾರಿಯಲ್ಲಿದೆ. ಆದುದರಿಂದ ಮುಂಜಾಗೃತ ಕ್ರಮವಾಗಿ ಜು.2 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ,ಅನುದಾನಿತ ಹಾಗೂ ಖಾಸಗಿ ಶಾಲಾ-ಪ್ರೌಡ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಆದರೆ ಕೆಲವು ಖಾಸಗಿ ಶಾಲೆ, ಕಾಲೇಜು ಹಾಗೂ ಶೈಕ್ಷಣಿಕ ಸಂಸ್ಥೆಗಳು ತರಗತಿಗಳನ್ನು ನಡೆಸುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳು ಹರಿದಾಡುತ್ತಿರುವುದು ಕಂಡುಬಂದಿರುತ್ತಿದೆ.
ಜಿಲ್ಲಾಡಳಿತದ ಆದೇಶದ ವಿರುದ್ಧವಾಗಿ ತರಗತಿಗಳನ್ನು ನಡೆಸಿರುವುದು ಕಂಡುಬಂದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.