ಬುರ್ಖಾ ಧರಿಸಿ ಕಣ್ತಪ್ಪಿಸಿದ್ದ ಕುಖ್ಯಾತ ಗೌಡಿ ಸುರ್ಮೋ ಇಮ್ರಾನ್ ಸೆರೆ
Tuesday, July 14, 2026
ಮಂಗಳೂರು: ಮಂಗಳೂರು ನಗರ ಹಾಗೂ ಉಡುಪಿ ಜಿಲ್ಲೆಯ ಒಟ್ಟು 23ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಹಲವು ಪ್ರಕರಣಗಳಲ್ಲಿ ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೆ ಬುರ್ಖಾ ಧರಿಸಿ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡು ಓಡಾಡುತ್ತಿದ್ದ ಕುಖ್ಯಾತ ರೌಡಿ ಅಸಾಮಿ ಇಮ್ರಾನ್ ಯಾನೆ ಸುರ್ಮೋ ಇಮ್ರಾನ್ ಎಂಬಾತನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಇಮ್ರಾನ್ ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ ಯತ್ನ, ದರೋಡೆ, ಹಲ್ಲೆ ಸೇರಿದಂತೆ ಹಲವು ಗಂಭೀರ ಅಪರಾಧ ಪ್ರಕರಣಗಳು ದಾಖಲಾಗಿದ್ದವು. ಹಲವು ಪ್ರಕರಣಗಳಲ್ಲಿ ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿದ್ದರೂ ಆತ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಪೊಲೀಸರಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಬುರ್ಖಾ ಧರಿಸಿಕೊಂಡು ಓಡಾಡುತ್ತಿದ್ದ ಎನ್ನಲಾಗಿದೆ.