ದ.ಕ. ಜಿಲ್ಲಾ ಬಿಜೆಪಿ ಕಚೇರಿಗೆ ಪಿ. ಸುಧಾಕರ್ ರೆಡ್ಡಿ ಭೇಟಿ
Wednesday, July 15, 2026
ಮಂಗಳೂರು: ಕರ್ನಾಟಕ ರಾಜ್ಯದ ಬಿಜೆಪಿ ಸಹಪ್ರಭಾರಿ ಪಿ. ಸುಧಾಕರ್ ರೆಡ್ಡಿ ಅವರು ಜು.14 ರಂದು ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಕಚೇರಿಗೆ ಭೇಟಿ ನೀಡಿದರು.
ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಆತ್ಮೀಯವಾಗಿ ಸ್ವಾಗತಿಸಿದರು.
ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ವಿಭಾಗ ಪ್ರಭಾರಿ ಭಾರತೀಶ್, ಮಂಗಳೂರು ನಗರ ದಕ್ಷಿಣದ ಶಾಸಕ ಡಿ. ವೇದವ್ಯಾಸ ಕಾಮತ್, ಮಾಜಿ ಶಾಸಕರಾದ ಸಂಜೀವ ಮಠಂದೂರು, ಕೆ. ಪ್ರತಾಪಸಿಂಹ ನಾಯಕ್, ಜಿಲ್ಲಾ ಉಪಾಧ್ಯಕ್ಷರಾದ ಪೂಜಾ ಪ್ರಶಾಂತ್ ಪೈ, ಸುನೀಲ್ ಆಳ್ವ, ಪ್ರಸನ್ನ ಮಾರ್ತ, ರಾಜ್ಯ ಓಬಿಸಿ ಮೋರ್ಚಾ ಕಾರ್ಯದರ್ಶಿ ಆರ್.ಸಿ. ನಾರಾಯಣ, ಓಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಶಿಧರ ಕಲ್ಮಂಜ ಮತ್ತಿತರರು ಉಪಸ್ಥಿತರಿದ್ದರು.