ಎಂಟು ಮಂದಿ ಬಾಂಗ್ಲಾದೇಶಿ ಪ್ರಜೆಗಳ ಪತ್ತೆ-ಅಕ್ರಮ ವಾಸ್ತವ್ಯ: ಗಡಿಪಾರಿಗೆ ಸಿದ್ಧತೆ

ಎಂಟು ಮಂದಿ ಬಾಂಗ್ಲಾದೇಶಿ ಪ್ರಜೆಗಳ ಪತ್ತೆ-ಅಕ್ರಮ ವಾಸ್ತವ್ಯ: ಗಡಿಪಾರಿಗೆ ಸಿದ್ಧತೆ


ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ  ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲವು ಬಾಂಗ್ಲಾದೇಶದ ಪ್ರಜೆಗಳಿರುವ ಬಗ್ಗೆ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಪೊಲೀಸರು ಶುಕ್ರವಾರ ದಾಳಿ ನಡೆಸಿ ಎಂಟು  ಮಂದಿ ಬಾಂಗ್ಲಾ ದೇಶಿ ಪ್ರಜೆಗಳನ್ನು ಪತ್ತೆ ಹಚ್ಚಿದ್ದಾರೆ. 

ಒಟ್ಟು 54 ಮಂದಿ ಕಟ್ಟಡ ಕಾರ್ಮಿಕರ ದಾಖಲಾತಿಗಳನ್ನು ಪರಿಶೀಲಿಸಿದಾಗ ಎಂಟು ಮಂದಿ ಬಾಂಗ್ಲಾ ಪ್ರಜೆಗಳು ಪತ್ತೆಯಾಗಿದ್ದಾರೆ. ಅಜರುಲ್ ಇಸ್ಲಾಂ, ಮುಹಮ್ಮದ್ ರಕೀಬ್, ಜಾಹಿದ್ ಹುಸೇನ್, ಮಹಮ್ಮದ್ ಬಿಲಾಲ್ ಹುಸೇನ್, ಸೋಯೆಬ್ ಉಲ್ಲಾ, ಮಹಮ್ಮದ್ ಸಂಟುಲ್, ಮೌಕರ್ ಆಲಿ, ಅಜರುಲ್ ಇಸ್ಲಾಂ ಪತ್ತೆಯಾಗಿರುವ ಬಾಂಗ್ಲಾ ಪ್ರಜೆಗಳು ಬಾಂಗ್ಲಾದೇಶದ ಪ್ರಜೆಗಳು ಸುಮಾರು ಮೂರು ತಿಂಗಳ ಹಿಂದೆ ಅಕ್ರಮವಾಗಿ ಬಾಂಗ್ಲಾದೇಶದಿಂದ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಮೂಲಕ  ಭಾರತಕ್ಕೆ ಬಂದು ನಂತರ ಮುರ್ಷಿದಾಬಾದ್‌ನ  ಪಶ್ಚಿಮ ಬಂಗಾಳದ ವಿಳಾಸವಿರುವ ಆಧಾರ್ ಕಾರ್ಡ್‌ಗಳಿಗೆ ಬಾಂಗ್ಲಾದೇಶ ನಿವಾಸಿಗಳ ಭಾವಚಿತ್ರವನ್ನು ಅಂಟಿಸಿ ಕಲರ್ ಜೆರಾಕ್ಸ್‌ನ್ನು ಮಾಡಿ ಎರಡು ತಿಂಗಳಿನಿಂದ ಮುಕ್ಕ ಬಂದು ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದರು.

ಬಾಂಗ್ಲಾ ಪ್ರಜೆಗಳನ್ನು ಠಾಣೆಗೆ ಕರೆತಂದು ಕೂಲಂಕಷವಾಗಿ ಪರಿಶೀಲನೆಯನ್ನು ಮಾಡಿ ಅವರ ಗುರುತಿನ ಚೀಟಿ ನ್ಯಾಷನಲ್ ಐಡಿ ಕಾರ್ಡ್, ಜನನ ಪ್ರಮಾಣ ಪತ್ರ ಹಾಗೂ ಅವರ ಕುಟುಂಬದವರ ದಾಖಲಾತಿಗಳನ್ನು ಪರಿಶೀಲಿಸಿದಾಗ ಇವರು ಬಾಂಗ್ಲಾದೇಶ ನಿವಾಸಿಗಳೆಂದು ದೃಢಪಟ್ಟಿದೆ. ಇವರು ಇಲ್ಲಿಗೆ ಕೂಲಿ ಕೆಲಸಕ್ಕಾಗಿ ಬಂದಿದ್ದರು. ಬಾಂಗ್ಲಾದೇಶ ನಿವಾಸಿಗಳು ಯಾವುದೇ ರಹದಾರಿ ಪತ್ರ, ವೀಸಾ ಅನ್ನು ಪಡೆಯದೆ ಅಕ್ರಮವಾಗಿ ಭಾರತದ ಗಡಿಯನ್ನು ದಾಟಿ ನುಸುಳಿ ಬಂದಿರುವುದಾಗಿದೆ ಅಕ್ರಮವಾಗಿ ನುಸುಳಿ ಭಾರತ ದೇಶವನ್ನು ಪ್ರವೇಶಿಸಿದ ಈ ಬಾಂಗ್ಲಾದೇಶದ ಪ್ರಜೆಗಳನ್ನು ಮುಂದಿನ ಕ್ರಮಕ್ಕಾಗಿ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಗೆ (ಎಫ್‌ಆರ್‌ಆರ್‌ಒ)  ವರದಿ ಕಳುಹಿಸಲಾಗುತ್ತಿದೆ, ನಂತರ ಬಾಂಗ್ಲಾ ಪ್ರಜೆಗಳನ್ನು ವಶಕ್ಕೆ ಪಡೆಯಲು ಎಫ್‌ಆರ್‌ಆರ್‌ಒ ಆದೇಶ ಹೊರಡಿಸಲಿದೆ ಹಾಗೂ ಸ್ವದೇಶಕ್ಕೆ ಗಡಿಪಾರು ಮಾಡಲು ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಕಟ್ಟಡ ಕಾಮಗಾರಿ ಗುತ್ತಿಗೆದಾರನ ವಿರುದ್ಧವೂ ಕಾನೂನ ಕ್ರಮ ತೆಗೆದುಕೊಳ್ಳಲಾಗುತ್ತಿದೆ.

ಮಂಗಳೂರು ಉತ್ತರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ  ಶ್ರೀಕಾಂತ್ ನೇತೃತ್ವದಲ್ಲಿ ಸುರತ್ಕಲ್ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್, ಪಿಎಸ್‌ಐ ರಘು ನಾಯಕ, ಠಾಣಾ ಸಿಬ್ಬಂದಿಗಳಾದ ಎ.ಎಸ್.ಐ ರಾಜೇಶ್ ಆಳ್ವ, ತಿರುಪತಿ ಅಳ್ಳೊಳ್ಳಿ, ಉಮೇಶ್, ರಾಜೇಂದ್ರ ಪ್ರಸಾದ್, ಕಾರ್ತಿಕ್, ವಿನೋದ್ ಕುಮಾರ್, ಸತೀಶ್ ಸತ್ತಿಗೇರಿ, ಸಂತೋಷ್ ಮತ್ತು ಓಂಪ್ರಕಾಶ್ ಬಿಂಗಿ ಕಾರ್ಯಾಚರಣೆ ನಡೆಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article