ಅಂಬೇಡ್ಕರ್ ಆದರ್ಶಗಳು ಸಮಾನ ಸಮಾಜ ನಿರ್ಮಾಣಕ್ಕೆ ಪ್ರೇರಣೆ

ಅಂಬೇಡ್ಕರ್ ಆದರ್ಶಗಳು ಸಮಾನ ಸಮಾಜ ನಿರ್ಮಾಣಕ್ಕೆ ಪ್ರೇರಣೆ


ಮಂಗಳೂರು: ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನವನ್ನು ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್) ವತಿಯಿಂದ ನಗರದ ಎಂಆರ್‌ಪಿಎಲ್ ಉದ್ಯೋಗಿಗಳ ಮನರಂಜನಾ ಕೇಂದ್ರದಲ್ಲಿ ಜು.೪ರಂದು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಎಂಆರ್‌ಪಿಎಲ್ ವ್ಯವಸ್ಥಾಪಕ ನಿರ್ದೇಶಕ ಮುಂಡ್ಕೂರು ಶ್ಯಾಮಪ್ರಸಾದ್ ಕಾಮತ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಂಶೋಧಕ, ಲೇಖಕ ಹಾಗೂ ಸಮಾಜಸೇವಕ ಡಾ. ವಡ್ಡಗೆರೆ ನಾಗರಾಜಯ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಎಂಆರ್‌ಪಿಎಲ್ ರಿಫೈನರಿ ನಿರ್ದೇಶಕ ನಂದಕುಮಾರ್ ವಿ. ಪಿಳ್ಳೈ ಹಾಗೂ ದಕ್ಷಿಣ ಕನ್ನಡ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ಬಿ.ಎಸ್. ಹೇಮಲತಾ ಗೌರವ ಅತಿಥಿಗಳಾಗಿದ್ದರು.

ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ 90 ಶೇಕಡಕ್ಕಿಂತ ಅಧಿಕ ಅಂಕ ಗಳಿಸಿದ 20 ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಮಾಜ ಸೇವೆಯಲ್ಲಿ ವಿಶಿಷ್ಟ ಕೊಡುಗೆ ನೀಡಿದ ಗಣ್ಯರಿಗೂ ಗೌರವ ಸಲ್ಲಿಸಲಾಯಿತು.

ನಂದಕುಮಾರ್ ವಿ. ಪಿಳ್ಳೈ ಮಾತನಾಡಿ, ಡಾ. ಅಂಬೇಡ್ಕರ್ ಅವರು ಸಾಮಾಜಿಕ ನ್ಯಾಯ, ಶಿಕ್ಷಣ, ಸಂವಿಧಾನ ಹಾಗೂ ನೈತಿಕ ನಾಯಕತ್ವಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಿದರು. ಡಾ. ಬಿ.ಎಸ್. ಹೇಮಲತಾ ಅವರು ಮಹಿಳಾ ಸಬಲೀಕರಣ ಮತ್ತು ಮಹಿಳಾ ಹಕ್ಕುಗಳಿಗಾಗಿ ಡಾ. ಅಂಬೇಡ್ಕರ್ ಸಲ್ಲಿಸಿದ ಸೇವೆಯನ್ನು ವಿವರಿಸಿದರು. ಮುಖ್ಯ ಭಾಷಣ ಮಾಡಿದ ಡಾ. ವಡ್ಡಗೆರೆ ನಾಗರಾಜಯ್ಯ ಅವರು ಸಮಾನತೆ, ಸ್ವಾತಂತ್ರ್ಯ, ಸಹೋದರತ್ವ ಹಾಗೂ ಸಾಮಾಜಿಕ ನ್ಯಾಯದ ಅಂಬೇಡ್ಕರ್ ಅವರ ಆದರ್ಶಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶಿಯಾಗಿವೆ ಎಂದು ಹೇಳಿದರು.

ಮುಂಡ್ಕೂರು ಶ್ಯಾಮಪ್ರಸಾದ್ ಕಾಮತ್ ಅವರು, ಡಾ. ಅಂಬೇಡ್ಕರ್ ಅವರ ಆದರ್ಶಗಳಿಂದ ಪ್ರೇರಿತವಾಗಿ ಸಮಾನತೆ ಮತ್ತು ಒಳಗೊಳ್ಳುವಿಕೆಗೆ ಆದ್ಯತೆ ನೀಡುವ ಕಾರ್ಯಸಂಸ್ಕೃತಿಯನ್ನು ಬೆಳೆಸಲು ಎಂಆರ್‌ಪಿಎಲ್ ಬದ್ಧವಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದ ಅಂಗವಾಗಿ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಬಳಿಕ ಉಡುಪಿಯ ಸುಮನಸ ತಂಡದಿಂದ "ಈಡಿ" ನಾಟಕ ಪ್ರದರ್ಶನ ನಡೆಯಿತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article