ಮೂರು ತಿಂಗಳು ಮಹಿಳೆಯರಿಗೆ ಟೈಲರಿಂಗ್ ತರಬೇತಿ

ಮೂರು ತಿಂಗಳು ಮಹಿಳೆಯರಿಗೆ ಟೈಲರಿಂಗ್ ತರಬೇತಿ

ಮಂಗಳೂರು: ಜಿಲ್ಲಾ ಸಣ್ಣ ಕೈಗಾರಿಕಾ ಸಂಘ, ಮಂಗಳೂರು ಮಹಿಳಾ ವಿಭಾಗದ ವತಿಯಿಂದ ಮಹಿಳೆಯರಿಗೆ ಜು.20 ರಿಂದ 3 ತಿಂಗಳ ಟೈಲರಿಂಗ್ ತರಬೇತಿಯನ್ನು ಆಯೋಜಿಸಲಾಗಿದೆ. 

ತರಬೇತಿಯು ಮಂಗಳೂರಿನ ಯೆಯ್ಯಾಡಿಯ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಭಾಂಗಣದಲ್ಲಿ ನಡೆಯಲಿದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕ ರಜೆಗಳ ಹೊರತಾಗಿ ಪ್ರತಿದಿನ ತರಬೇತಿ ನಡೆಯಲಿದೆ. ತರಬೇತಿಗೆ ಬೇಕಾದ ಸಾಮಗ್ರಿಗಳನ್ನು ಅಭ್ಯರ್ಥಿಗಳೇ ತರಬೇಕಾಗುತ್ತದೆ. ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ ಪಾಲ್ಗೊಂಡವರಿಗೆ ಪ್ರಮಾಣಪತ್ರಗಳನ್ನು ನೀಡಲಾಗುತ್ತದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಣ್ಣ ಕೈಗಾರಿಕಾ ಸಂಘ, ಮಂಗಳೂರು ಕಚೇರಿ ಅಥವಾ ಮೊ.ನಂ: 9483791031 ಸಂಪರ್ಕಿಸಬಹುದು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article