ಹಲವು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Saturday, July 4, 2026
ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯೋರ್ವನನ್ನು ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಠಾಣೆಯ ಪೊಲೀಸರು ಜುಲೈ 3ರಂದು ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿರುತ್ತದೆ.
ಕೊಳ್ನಾಡು ಕುಡ್ತಮುಗೇರು ನಿವಾಸಿ ಜುಬೈರ್ (32) ದಸ್ತಗಿರಿ ಮಾಡಲಾದ ಆರೋಪಿ.
ಆರೋಪಿಯು ಅ.ಕ್ರ. 104-2025, U/S 66(C), 66(D) IT Act -2008 ಮತ್ತು ಕಲಂ: 126 (2), 308(6), 318(4), 319(2), 3(5) BNS (ಡಿಜಿಟಲ್ ಅರೆಸ್ಟ್ ಪ್ರಕರಣ) ಪ್ರಕರಣದಲ್ಲಿ ಭಾಗಿಯಾಗಿರುತ್ತಾನೆ. ಆರೋಪಿಯು ಸಾರ್ವಜನಿಕರಿಂದ ಬ್ಯಾಂಕ್ ಖಾತೆಗಳನ್ನು ಪಡೆದು, ಸೈಬರ್ ವಂಚನೆಯ ಹಣದ ವಹಿವಾಟಿಗೆ ಸಹಕಾರ ನೀಡಿ ಸೈಬರ್ ಅಪರಾಧಕ್ಕೆ ಸಹಕರಿಸುತ್ತಿದ್ದ ಎಂದು ಆರೋಪಿಸಲಾಗಿದೆ.
ವಿಚಾರಣೆಯ ವೇಳೆ ಆರೋಪಿಯ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ ( ಅ.ಕ್ರ 180/2022) ಸೇರಿದಂತೆ ರಾಜ್ಯದ ಬೇರೆ ಬೇರೆ ಠಾಣೆಗಳಲ್ಲಿ ಒಟ್ಟು 4 ಪ್ರಕರಣಗಳು ದಾಖಲಾಗಿರುವುದು ತಿಳಿದುಬಂದಿದೆ. ಆರೋಪಿಯು ಹಲವು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ, ದಸ್ತಗಿರಿಗೆ ಸಿಗದೇ ತಲೆ ಮರೆಸಿಕೊಂಡಿರುವುದು ಬೆಳಕಿಗೆ ಬಂದಿದೆ.