ಕರ್ನಾಟಕದಲ್ಲಿ ಪ್ರಿಯಾಂಕ್ ಮಾಡೆಲ್-ಕೈ ಕಟ್ ಬಾಯ್ ಮುಚ್: ಡಾ. ವೈ. ಭರತ್ ಶೆಟ್ಟಿ ಕಿಡಿ
Wednesday, July 1, 2026
ಮಂಗಳೂರು: ಉತ್ತರ ಕರ್ನಾಟಕದಲ್ಲಿ ಕಾರ ಹುಣ್ಣಿಮೆ ಹಬ್ಬದ ಸಂದರ್ಭದಲ್ಲಿ ಹೋರಿ ಓಡಿಸುವ ವೇಳೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಪ್ರಕಟಣೆಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾರ ಹುಣ್ಣಿಮೆಯ ಸಂದರ್ಭದಲ್ಲಿ ಹೋರಿ ಓಡಿಸುವಾಗ ಮಸೀದಿ ಬಳಿ ಪಟಾಕಿ ಸಿಡಿಸಿದ ಕಾರಣಕ್ಕೆ ಮತಾಂಧ ಜಿಹಾದಿಗಳು ರೈತರ ಕೈಗಳನ್ನು ಕತ್ತರಿಸಿ ವಿಕೃತಿ ಮೆರೆದಿರುವುದು ನಿಜಕ್ಕೂ ಆತಂಕಕಾರಿ ವಿಷಯ ಎಂದು ಅವರು ಆರೋಪಿಸಿದ್ದಾರೆ.
ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆಯವರ ಬ್ರದರ್ಸ್‌ನ ಅಟ್ಟಹಾಸಕ್ಕೆ ಹಿಂದೂಗಳಿಗೆ ಅವರ ನೆಲದಲ್ಲೇ ರಕ್ಷಣೆ ಇಲ್ಲದಂತಾಗಿದೆ ಎಂದು ಹೇಳಿದ ಅವರು, ಇದೇ ರೀತಿ ಕಾನೂನು ಸುವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸದಿದ್ದರೆ ಮುಂದಿನ ದಿನಗಳಲ್ಲಿ ಜಿಹಾದಿಗಳ ಅಟ್ಟಹಾಸಕ್ಕೆ ದಾರಿ ಮಾಡಿಕೊಡುವ 'ಪ್ರಿಯಾಂಕ್ ಮಾಡೆಲ್' ರಾಜ್ಯದಲ್ಲಿ ಜಾರಿಯಾಗುವ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಆತಂಕ ವ್ಯಕ್ತಪಡಿಸಿದರು.
ತಪ್ಪಿತಸ್ಥರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಂಡು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಡಾ. ವೈ. ಭರತ್ ಶೆಟ್ಟಿ ಪ್ರಕಟಣೆಯಲ್ಲಿ ಆಗ್ರಹಿಸಿದರು.