ರೋಗಿ ಸಾವು: ಆಸ್ಪತ್ರೆ ನಿರ್ಲಕ್ಷ್ಯ ಆರೋಪ
Saturday, July 11, 2026
ಮಂಗಳೂರು: ಸುರತ್ಕಲ್ ಪದ್ಮಾವತಿ ಖಾಸಗಿ ಆಸ್ಪತ್ರೆಗೆ ಅನಾರೋಗ್ಯದಿಂದ ದಾಖಲಾಗಿದ್ದ ತಡಂಬೈಲ್ ನಿವಾಸಿ ದಿನೇಶ್ ಕುಲಾಲ್ (45) ಎಂಬವರು ಇಂದು ನಸುಕಿನ ಜಾವ ಮೃತಪಟ್ಟಿದ್ದು ಇದಕ್ಕೇ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.
ದಿನೇಶ್ ಅವರು ಜ್ವರದ ಕಾರಣದಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ಸಂಜೆ 5.30ರ ಸುಮಾರಿಗೆ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದು ಉಸಿರಾಟದ ತೀವ್ರ ತೊಂದರೆಯಿದ್ದರೂ ವೈದ್ಯರು ಮತ್ತು ನರ್ಸ್‌ಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಶನಿವಾರ ನಸುಕಿನ ಜಾವ ಮೃತಪಟ್ಟಿದ್ದು ಪೋಷಕರು ಆಸ್ಪತ್ರೆ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.