ಮಂತ್ರಾಲಯ ಕಾರು ಅಪಘಾತ: ಮಂಗಳೂರಿನ ರವಿ ಶೆಟ್ಟಿ ಸಾವು, ಮೂವರಿಗೆ ಗಂಭೀರ ಗಾಯ
ರವಿ ಶೆಟ್ಟಿ ಅವರು ತಮ್ಮ ಸ್ನೇಹಿತರೊಂದಿಗೆ ಮಂತ್ರಾಲಯ ರಾಘವೇಂದ್ರ ಸ್ವಾಮಿಯ ದರ್ಶನಕ್ಕೆ ತೆರಳಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅವರ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ರವಿ ಶೆಟ್ಟಿಯವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಮಂಗಳೂರಿನ ಪ್ರದೀಪ್ ಆಳ್ವ, ಪುರುಷೋತ್ತಮ ಭಂಡಾರಿ, ಸಿಎ ಸುಧೇಶ್ ರೈ ಎಂದು ಗುರುತಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ರವಿಶೆಟ್ಟಿ ತಮ್ಮ ಸ್ನೇಹಿತರೊಂದಿಗೆ ರಾಘವೇಂದ್ರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಲು ಮಂತ್ರಾಲಯಕ್ಕೆ ಹೊರಟಿದ್ದರು. ಅವರು ಪ್ರಯಾಣಿಸುತ್ತಿದ್ದ ಕಾರು ಮಂತ್ರಾಲಯದ ಬಳಿ ನಿಯಂತ್ರಣ ತಪ್ಪಿ ಕಲ್ವರ್ಟ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ರವಿಶೆಟ್ಟಿ ಸ್ಥಳದಲ್ಲೇ ಸಾವನ್ನಪ್ಪಿದರು. ಕಾರಿನಲ್ಲಿದ್ದ ಇತರ ಮೂವರು ಕುಟುಂಬ ಸದಸ್ಯರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ರವಿ ಶೆಟ್ಟಿ ಅವರು ಯಕ್ಷಧ್ರುವ ಪಟ್ಲ ಇದರ ಜೊತೆ ಕಾರ್ಯದರ್ಶಿ, ಉರ್ವ ಬಂಟರ ಸಂಘದ ಅಧ್ಯಕ್ಷರಾಗಿ, ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ತಾಯಿ, ಪತ್ನಿ, ಇಬ್ಬರು ಮಕ್ಕಳನ್ನು ಆಗಲಿದ್ದಾರೆ.