ಡಾ. ಶ್ಯಾಮ ಪ್ರಸಾದ್ ಮುಖರ್ಜಿಯವರ ಜನ್ಮದಿನ
Tuesday, July 7, 2026
ಮಂಗಳೂರು: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ವತಿಯಿಂದ ಜು.6 ರಂದು ಡಾ. ಶ್ಯಾಮ ಪ್ರಸಾದ್ ಮುಖರ್ಜಿಯವರ ಜನ್ಮದಿನವನ್ನು ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರ ಉಪಸ್ಥಿತಿಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಬಿಜೆಪಿ ಕಾರ್ಯಾಲಯದಲ್ಲಿ ಆಚರಿಸಲಾಯಿತು.
ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರು ನಡೆದು ಬಂದ ಹಾದಿಯ ಬಗ್ಗೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವಾರ್ ಅವರು ಸಂಕ್ಷಿಪ್ತವಾಗಿ ವಿವರಿಸಿದರು.
ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಜಿಲ್ಲಾ ಕಾರ್ಯದರ್ಶಿ ದೇವಪ್ಪ ಪೂಜಾರಿ. ಸುಜಿತ್ ಪ್ರತಾಪ್, ಜಿಲ್ಲಾ ಕೋಶಾಧಿಕಾರಿ ಸಂಜಯ ಪ್ರಭು, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಗುರುಚರಣ್, ಜಿಲ್ಲಾ ಪ್ರಕೋಷ್ಠ ಸಂಚಾಲಕರಾದ ಸುಧೀರ್ ಶೆಟ್ಟಿ ಕಣ್ಣೂರು, ಸಹ ಸಂಚಾಲಕ ಪ್ರಸನ್ನ ದರ್ಭೆ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಡಾ. ಮಂಜುಳಾ ಅನಿಲ್ ರಾವ್, ಪ್ರಧಾನ ಕಾರ್ಯದರ್ಶಿ ಲಖಿತಾ ಆರ್ ಶೆಟ್ಟಿ, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಜಗದೀಶ್ ಬೆಳ್ವಾಯಿ, ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾಧ್ಯಕ್ಷ ಶಹನವಾಜ್, ಮಾಜಿ ವಿಧಾನಸಭಾ ಸದಸ್ಯ ಕೆ. ಮೋನಪ್ಪ ಭಂಡಾರಿ, ಮಾಜಿ ಮೂಡ ಅಧ್ಯಕ್ಷ ರವಿಶಂಕರ್ ಮಿಜಾರ್, ಪ್ರಮುಖರಾದ ಶಭರೀಶ್, ರಾಮ ಅಮೀನ್ ಪಚ್ಚನಾಡಿ, ಶೀನಿವಾಸ ಶೇಟ್, ವಿವೇಕ್ ಶೆಟ್ಟರ್, ಸದಾಶಿವ ಆಳ್ವ, ಮೀರ ಕರ್ಕೇರ, ಸುಧಾ ಸುರೇಶ್, ಸುಮ ಶೆಟ್ಟಿ, ಕುಶಲ ಉಪಸ್ಥಿತರಿದ್ದರು.