ಶಾಲೆಗಳಿಗೆ ಮೂಲ ಸೌಕರ್ಯ ಒದಗಿಸುವಂತೆ ಆಗ್ರಹ

ಶಾಲೆಗಳಿಗೆ ಮೂಲ ಸೌಕರ್ಯ ಒದಗಿಸುವಂತೆ ಆಗ್ರಹ

ಮಂಗಳೂರು: ರಾಜ್ಯದಲ್ಲಿ ಶಾಲೆಗಳು ಆರಂಭವಾಗಿ 2 ತಿಂಗಳು ಕಳೆದಿದೆ. ಆದರೆ ವಿದ್ಯಾರ್ಥಿಗಳಿಗೆ ಅತ್ಯವಶ್ಯಕವಾದ ಅನೇಕ ಮೂಲ ಸೌಲಭ್ಯಗಳು ಇಲ್ಲಿಯವರೆಗೂ ದೊರೆತಿಲ್ಲ. ಇಲ್ಲಿಯವರೆಗೂ ಶೂ ಮತ್ತು ಸಾಕ್ಸ್ ವಿದ್ಯಾರ್ಥಿಗಳಿಗೆ ಲಭ್ಯವಾಗಿಲ್ಲ. 

ಈ ಶೈಕ್ಷಣಿಕ ವರ್ಷದಿಂದ ಸರ್ಕಾರವೇ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಎಲ್ಲ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಕೊಡಲು ನಿರ್ಧರಿಸಿತ್ತು. ಆದರೆ ನೋಟ್ ಬುಕ್ ಕೂಡ ಇಲ್ಲಿಯವರೆಗೂ ಶಾಲೆಗಳನ್ನು ತಲುಪಿಲ್ಲ. ಇನ್ನು ಮೊಟ್ಟೆ ಮತ್ತು ಬಾಳೆಹಣ್ಣು ವಿತರಿಸಲು ಸರ್ಕಾರ ನೀಡುತ್ತಿರುವ ಹಣ ಮಾರುಕಟ್ಟೆ ದರಕ್ಕಿಂತ ಕಡಿಮೆ ಇರುವುದರಿಂದ ಶಿಕ್ಷಕರೇ ತಮ್ಮ ಜೇಬಿನಿಂದ ಹೆಚ್ಚುವರಿ ಹಣವನ್ನು ಭರಿಸುವ ಪರಿಸ್ಥಿತಿಗೆ ತಳ್ಳಲ್ಪಟ್ಟಿದ್ದಾರೆ. 

ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡಬೇಕಿದ್ದ ಶಿಕ್ಷಣ ಮಂತ್ರಿಗಳೇ ನಮ್ಮ ರಾಜ್ಯಕ್ಕೆ ಇನ್ನೂ ದೊರೆತಿಲ್ಲ. ಸರ್ಕಾರದ ಶಿಕ್ಷಣದ ಬಗೆಗಿನ, ಅದರಲ್ಲೂ ಬಡ ರೈತ ಕಾರ್ಮಿಕರ ಮಕ್ಕಳು ಓದುವ ಸರ್ಕಾರಿ ಶಾಲೆಗಳ ಕುರಿತಾದ ಈ ನಿರ್ಲಕ್ಷ್ಯ ಧೋರಣೆಯನ್ನು ಎಐಡಿಎಸ್‌ಓ ತೀವ್ರವಾಗಿ ಖಂಡಿಸುತ್ತದೆ. 

ಕೂಡಲೇ ರಾಜ್ಯಕ್ಕೆ ಶಿಕ್ಷಣ ಮಂತ್ರಿಗಳನ್ನು ನೀಡಬೇಕು ಮತ್ತು ವಿದ್ಯಾರ್ಥಿಗಳಿಗೆ ಎಲ್ಲ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಐಡಿಎಸ್‌ಓ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿಗಳನ್ನು ಎಐಡಿಎಸ್‌ಓ ಪ್ರಕಟಣೆಯಲ್ಲಿ ಆಗ್ರಹಿಸಿದೆ ಆಗ್ರಹಿಸುತ್ತದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article