ಧರ್ಮಸ್ಥಳ ಪ್ರಕರಣ: ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ
Wednesday, July 15, 2026
ಮಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿಯನ್ನು ಸಲ್ಲಿಸಿದ್ದಾರೆ.
ಬೆಳ್ತಂಗಡಿ ಎಸ್‌ಐಟಿ ಅಧಿಕಾರಿಗಳು ಧರ್ಮಸ್ಥಳ ಪ್ರಕರಣದಲ್ಲಿ 20-11-2025ರಂದು BNS (u/s-215) ಅಡಿಯಲ್ಲಿ ಸಿ.ಎನ್.ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ., ವಿಠಲ್ ಗೌಡ ಹಾಗೂ ಸುಜಾತಾ ಭಟ್ ವಿರುದ್ಧ 3,923 ಪುಟಗಳ ’ಸುಳ್ಳು ಸಾಕ್ಷ್ಯ’ ವರದಿಯನ್ನು ಸಲ್ಲಿಕೆ ಮಾಡಿದ್ದರು.
ಈ ವರದಿಯನ್ನು ಒಪ್ಪಲು ನ್ಯಾಯಾಲಯ ನಿರಾಕರಿಸಿ ಅಂತಿಮ ವರದಿ ನೀಡುವಂತೆ ಸೂಚಿಸಿತ್ತು. ಎಸ್‌ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಶಶಾಂಕ್ ನಾಗೇಂದ್ರ ಭಟ್ ಮುಂದೆ ಜು.15 ರಂದು ಅಪರಾಹ್ನ 3 ಗಂಟೆಗೆ ಎಸ್‌ಐಟಿ ಮೊದಲಿನ 3,923 ಮತ್ತು ಈಗಿನ 3,082 ಸೇರಿ ಈವರೆಗೆ ತನಿಖೆಯ ಸಂಪೂರ್ಣ ಒಟ್ಟು 7,005 ಪುಟಗಳ ಅಂತಿಮ ವರದಿಯನ್ನು 12 ಫೈಲ್‌ಗಳನ್ನು ಮಾಡಿ ಸಲ್ಲಿಸಿದ್ದಾರೆ.
ಎಸ್‌ಐಟಿ ಎಸ್ಪಿ ಸಿ.ಎ.ಸೈಮನ್, ಇನ್ ಸ್ಪೆಕ್ಟರ್ ಕುಸುಮಾಧರ್, ಇನ್‌ಸ್ಪೆಕ್ಟರ್ ಮಂಜುನಾಥ್ ಹಾಗೂ ಸಿಬ್ಬಂದಿ ನ್ಯಾಯಾಲಯದಲ್ಲಿ ಹಾಜರಿದ್ದರು.
ಪ್ರಕರಣದ ಆರೋಪಿ ಚಿನ್ನಯ್ಯ ಕೂಡ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ.